

ವಿಜಯಪುರ: ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾದುದು ಎಂದು ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್.ಮದಭಾವಿ ಅಭಿಪ್ರಾಯಪಟ್ಟರು.
ಇಲ್ಲಿನ ಬಿಎಲ್‌ಡಿಇ ಸಂಸ್ಥೆಯ ಶ್ರೀ ಸಂಗನಬಸವ ಾರ್ಮಸಿ ಕಾಲೇಜಿನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಘಟನೆಗಳನ್ನು ಶಿಕ್ಷಕರು ಮಕ್ಕಳಿಗೆ ಪಾತ್ರಗಳ ಮೂಲಕ ಅವರಿಗೆ ಮನವರಿಕೆ ಮಾಡುವುದು. ಅಲ್ಲದೆ, ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ನಡೆದ ಪ್ರಮುಖ ಘಟನೆಗಳನ್ನು ಓದಿದರೆ ವ್ಯಕ್ತಿತ್ವದ ಬೆಳೆವಣಿಗೆಗೆ ಸಹಕಾರಿ ಎಂದರು.
ನಂತರ ಡಾ.ಎಂ.ಎಸ್.ಮಧಬಾವಿ ಕನ್ನಡದಲ್ಲಿ ಹಾಗೂ ಸುರೇಶ್ ಹಕ್ಕಿ ಇಂಗ್ಲಿಷ್‌ನಲ್ಲಿ ಪ್ರತಿಜ್ಞೆಯನ್ನು ಪಠಿಸಿದರು. ಕಾಲೇಜು ವತಿಯಿಂದ 75 ವಿವಿಧ ಕಾರ್ಯಕ್ರಮಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಯಿತು. ಬಿಎಲ್‌ಡಿಇ ಸಂಸ್ಥೆ ಹಣಕಾಸು ಅಧಿಕಾರಿ ದೇವೇಂದ್ರ ಅಗರವಾಲ್, ಪ್ರಾಚಾರ್ಯ ಡಾ.ಆರ್.ಬಿ.ಕೊಟ್ನಾಳ, ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.