ಕರೊನಾ ತಡೆಗಟ್ಟುವಲ್ಲಿ ಸರ್ಕಾರ ವಿಫಲ

Congress Logo
Published on

ವಿಜಯಪುರ: ಕರೊನಾ ಮಹಾಮಾರಿ ರೋಗ ಇಡೀ ಮಾನವ ಕುಲಕ್ಕೆ ಕಂಟಕವಾಗಿದ್ದು, ಅದನ್ನು ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಹೇಳಿದರು.

ನಗರದ ವಾರ್ಡ್ ನಂ.9ರ ಬಾಗಾಯತ ಬಡಾವಣೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಆರೋಗ್ಯ ಹಸ್ತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕರೊನಾ ರೋಗದ ಬಗ್ಗೆ ಸರ್ಕಾರ ನಿರ್ಲಕ್ಷೃವಹಿಸುತ್ತಿರುವುದು ದುರಾದೃಷ್ಠಕರವಾಗಿದೆ. ಜನ ಈ ರೋಗಕ್ಕೆ ಭಯಭೀತರಾಗಿದ್ದು, ಜನರಲ್ಲಿ ಆತ್ಮಸ್ಥೈರ್ಯ ತುಂಬಬೇಕಾಗಿದೆ. ಸರ್ಕಾರದ ದ್ವಂದ್ವ ನೀತಿಗಳಿಂದ ಖಾಸಗಿ ಆಸ್ಪತ್ರೆಗಳಿಗೆ ಹಗಲು ದರೋಡೆಗೆ ಇಳಿದಿವೆ. ಅವುಗಳ ಮೇಲೆ ನಿಯಂತ್ರಣ ಸಾಧಿಸಬೇಕಿದೆ ಎಂದು ಒತ್ತಾಯಿಸಿದರು.

ಪಾಲಿಕೆ ಮಾಜಿ ಸದಸ್ಯ ಅಬ್ದುಲ್ ರಜಾಕ್ ಹೊರ್ತಿ ಮಾತನಾಡಿ, ಕೋವಿಡ್ ಮಹಾಮಾರಿ ರೋಗದಿಂದ ಬಳಲುತ್ತಿರುವವರಿಗೆ ಸರ್ಕಾರ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ್‌ಅಹ್ಮದ್ ಬಕ್ಷೀ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖಾದರ್ ಖಾದೀಮ್, ಮುಖಂಡರಾದ ಜಮೀರ್ ಅಹ್ಮದ್ ಬಾಂಗಿ, ಇದ್ರೂಷ್ ಬಕ್ಷಿ, ವಸಂತ ಹೊನಮೊಡೆ, ರಫಿಕ್ ಇನಾಮದಾರ, ರವೀಂದ್ರ ಜಾಧವ, ಜಯಶ್ರೀ ಭಾರತೆ, ಮಂಜುಳಾ ಜಾಧವ, ಅಸೀಮಾ ಕಾಲೇಬಾಗ, ಆಯೂಬ್ ಬಾಂಗಿ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net