ಶಿವಾಜಿ ಮೂರ್ತಿ ಭವ್ಯ ಮೆರವಣಿಗೆ

hn-16-3
Published on

ವಿಜಯಪುರ: ಮಹಾರಾಷ್ಟ್ರದಲ್ಲಿ ತಯಾರಿಸಿದ್ದ 10 ಅಡಿ ಎತ್ತರದ ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆ ಭಾನುವಾರ ವಿಜಯಪುರ ನಗರದಲ್ಲಿ ವಿಜೃಂಭಣೆಯಿಂದ ಜರುಗಿತು.

ಶಾಸಕ ಬಸನಗೌಡ ಪಾಟೀಲ ಯತ್ನಾಳ, ಶಿವಾಜಿ ಮೂರ್ತಿಗೆ ಪುಷ್ಪನಮನ ಸಲ್ಲಿಸಿ, ದೇಶಭಕ್ತ ಶಿವಾಜಿ ಮಹಾರಾಜರ ಕೊಡುಗೆ ಅಪಾರ ಎಂದು ತಿಳಿಸಿದರು. ವಿಜಯಪುರ ನಗರದ ಶಿವಾಜಿ ವೃತ್ತ, ಗಾಂಧಿಚೌಕ್, ಬಸವೇಶ್ವರ ವೃತ್ತದ ಮೂಲಕ ಅದ್ದೂರಿ ಮೆರವಣಿಗೆ ನಡೆಯಿತು.

ನಂತರ ಶಿವಾಜಿ ಮೂರ್ತಿಯನ್ನು ಸಿಂದಗಿ ತಾಲೂಕಿನ ಮಲಘಾಣ ಗ್ರಾಮದಲ್ಲಿ ಪ್ರತಿಷ್ಠಾಪನೆಗೆ ಕೊಂಡೊಯ್ಯಲಾಯಿತು. ಈ ವೇಳೆ ಪಾಲಿಕೆ ಮಾಜಿ ಸದಸ್ಯ ರಾಹುಲ ಜಾಧವ, ಮರಾಠ ಸಮಾಜದ ಮುಖಂಡರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net