ಮಹಿಳೆಯರು ಸ್ವಯಂ ರಕ್ಷಣೆ ಮಾಡಿಕೊಳ್ಳಿ

hn-8-3
Published on

ವಿಜಯಪುರ : ಇಂದಿನ ಪೀಳಿಗೆಯ ಮಹಿಳೆಯರು ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕು ಎಂದು ಎಪಿಎಂಸಿ ಠಾಣೆಯ ಪಿಎಸ್‌ಐ ಪ್ರೇಮಾ ಕುಚಬಾಳ ಹೇಳಿದರು.

ನಗರದ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಸ್ಥೆ ಅಧ್ಯಕ್ಷೆ ಶೀಲಾ ಬಿರಾದಾರ ಮಾತನಾಡಿ, ಹೆಣ್ಣು ಮಕ್ಕಳು ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ತಮ್ಮದೆಯಾದ ಸವಾಲುಗಳು ಮತ್ತು ಸಮಸ್ಯೆಗಳು ಇವೆ. ಅವುಗಳನ್ನು ಅವರೇ ಬಗೆಹರಿಸಿಕೊಳ್ಳಬೇಕು. ಅವರು ಪರಾವಲಂಬಿಯಾಗದೆ ಸ್ವಾವಲಂಬಿಯಾಗಬೇಕು ಎಂದರು.

ಸಂಸ್ಥೆಯ ನಿರ್ದೇಶಕಿ ದಿವ್ಯಾ ಬಿರಾದಾರ, ಸಂಸ್ಥೆಯ ನಿರ್ದೇಶಕ ಭರತ ಬಿರಾದಾರ, ಪ್ರಾಂಶುಪಾಲ ಶ್ರೀಧರ ಕುರಬೇಟ, ಶಿಕ್ಷಕರಾದ ಪ್ರವೀಣಕುಮಾರ ಗೆಣ್ಣೂರ, ಎ.ಎಚ್. ಸಗರ್, ಸವಿತಾ ಪಾಟೀಲ, ಶೋಭಾ ಕೂಡಗಿ, ಸರೋಜಾ ಕರಕಳ್ಳಿ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net