ಆರ್‌ಕೆಎಂ ಕಾಲೇಜಿಗೆ ಉತ್ತಮ ಫಲಿತಾಂಶ

hn 23-1
Published on

ವಿಜಯಪುರ: ನಗರದ ಆರ್‌ಕೆಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಕಳೆದ ಜೂನ್‌ನಲ್ಲಿ ನಡೆದ ಅಂತಿಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ನಿಶಾರಾಣಿ ಜಮಶೆಟ್ಟಿ ಶೇ.77ರಷ್ಟು ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಅನಿಕೇತ ಮಂತ್ರಿ ಶೇ.77 ದ್ವಿತೀಯ, ಆರತಿ ಮಕಣಿಕರ ಶೇ.75 ತೃತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 66 ವಿದ್ಯಾರ್ಥಿಗಳು ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗಿದ್ದು, 59 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಅದರಲ್ಲಿ ಇಬ್ಬರು ಡಿಸ್ಟಿಂಕ್ಷನ್, 48 ಪ್ರಥಮ ಶ್ರೇಣಿಯಲ್ಲಿ, 9 ಜನ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net