ಉಚಿತ ತರಬೇತಿ

Training
Published on

ವಿಜಯಪುರ: ಇಲ್ಲಿನ ರುಡ್‌ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ಯುವಕ, ಯುವತಿಯರಿಗೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಉಚಿತವಾಗಿ ಹಮ್ಮಿಕೊಳ್ಳಲಾಗಿದೆ. ಬೇಸಿಕ್ ಕಂಪ್ಯೂಟರ್, ಅಗರಬತ್ತಿ, ಸೋಪ್ ತಯಾರಿಕೆ, ಟೈಲರಿಂಗ್, ಗೃಹ ಉಪಯೋಗಿ ಉಪಕರಣಗಳ ರಿಪೇರಿ, ಪಂಪ್‌ಸೆಟ್ ಸರ್ವಿಸ್ ಕುರಿತು ತರಬೇತಿ ನೀಡಲಾಗುತ್ತದೆ. ಆಸಕ್ತರು ಬಿಪಿಎಲ್ ಕಾರ್ಡ್, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್‌ಬುಕ್ ನಕಲು ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು. ಮಾಹಿತಿಗಾಗಿ ದೂ: 08352-297025 ಸಂಪರ್ಕಿಸಬಹುದು ಎಂದು ರುಡ್‌ಸೆಟ್ ಸಂಸ್ಥೆ ನಿರ್ದೇಶಕ ರಾಜೇಂದ್ರ ಜೈನಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net