ಕರೊನಾ ಭಯಬೇಡ, ಎಚ್ಚರವಿರಲಿ

VMS 4-5
Published on

ವಿಜಯಪುರ: ಕೋವಿಡ್-19 ವೈರಸ್ ಬಗ್ಗೆ ಭಯ ಬೇಡ. ಆದರೆ ಎಚ್ಚರವಿರಲಿ ಎಂದು ಸಮರ್ಥ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಶ್ರೀಮಂತ ಕಟ್ಟಿ ಹೇಳಿದರು.
ಗುರುವಾರ ನಗರದ ಕೆಎಸ್‌ಆರ್‌ಟಿಸಿ ವರ್ಕ್‌ಶಾಪ್ ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ಕೂಲಿ ಕಾರ್ಮಿಕರಿಗೆ, ಆಟೋ ರೀಕ್ಷಾ ಚಾಲಕರಿಗೆ, ವ್ಯಾಪರಸ್ಥರಿಗೆ ಹಾಗೂ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಹ್ಯಾಂಡ್ ಸ್ಯಾನಿಟೈಸರ್ ಬಳಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ದೈನಂದಿನ ಕಾರ್ಯಗಳಲ್ಲಿ ತೊಡಗಿಕೊಳ್ಳಿ ಎಂದು ಹೇಳಿದರು. ಎಂ.ಎನ್. ವಾಲಿಕಾರ, ಸಂಜು ಮಖಣಾಪುರ, ವಾಸುದೇವ ಪವಾರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net