ನಿರ್ಲಕ್ಷಿತ ಕ್ಷೇತ್ರಗಳ ಅಭಿವೃದ್ಧಿ ಆಗಲಿ

hn-25-2
Published on

ವಿಜಯಪುರ: ನಿರ್ಲಕ್ಷಿತ ಕ್ಷೇತ್ರಗಳಿಗೆ ಆದ್ಯತೆ ನೀಡಿ ಅಭಿವೃದ್ಧಿ ಪಡಿಸುವುದು ಸದ್ಯದ ಅಗತ್ಯವಾಗಿದೆ ಎಂದು ಹೆಗ್ಗೋಡಿನ ಹಿರಿಯ ಚಿಂತಕ ಪ್ರಸನ್ನ ಹೇಳಿದರು.

ಇಲ್ಲಿನ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಚಿಂತನ ಸಾಂಸ್ಕೃತಿಕ ಬಳಗ ಸಹಯೋಗದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಅವರು ‘ಗ್ರಾಮೋದ್ಯೋಗ ಮತ್ತು ಆರ್ಥಿಕತೆ’ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

ಮಹಿಳೆಯರು ಸೇರಿ ನಿರ್ಲಕ್ಷಿತರಾಗಿರುವ ಮತ್ತು ಶೇ.65 ರಷ್ಟಿರುವ ಜನರ ಗ್ರಾಮೋದ್ಯೋಗಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ತಾವು ಅಭಿಯಾನ ಆರಂಭಿಸಿರುವುದಾಗಿ ಅವರು ತಿಳಿಸಿದರು.

ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಮಾತನಾಡಿ, ವಿಜಯಪುರದ ರೈತ ರಾಮಪ್ಪ ಬಾಲಪ್ಪ ಬಿದರಿ ಅವರು ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ನನಸು ಮಾಡಿದ್ದರು ಎಂದು ಸ್ಮರಿಸಿದರು.

ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಮಾತನಾಡಿ, ಗಾಂಧೀಜಿ ಅವರ ಗ್ರಾಮ ಸ್ವರಾಜ್ಯ ಕಲ್ಪನೆ ನನಸಾಗಬೇಕಾದರೆ ನಿಸರ್ಗದ ಸಂರಕ್ಷಣೆ ಮಾಡಬೇಕು. ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡಬೇಕು. ಕೇವಲ ವೃತ್ತಿಪರ ಉದ್ಯೋಗಗಳ ಕಡೆ ಗಮನ ಹರಿಸದೆ, ಸಮಾಜ ಮತ್ತು ಪರಿಸರಕ್ಕೆ ಪೂರಕವಾಗಿರುವ ಕೃಷಿ ಚಟುಚಟಿಕೆಗೂ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್.ಮದಭಾವಿ, ಚಿಂತನ ಬಳಗದ ಕಾರ್ಯದರ್ಶಿ ಡಾ.ಮಹಾಂತೇಶ ಬಿರಾದಾರ, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾಧ್ಯಕ್ಷ ವಿ.ಸಿ.ನಾಗಠಾಣ, ಶರಣ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಂ.ಜಿ.ಯಾದವಾಡ, ಪ್ರೊ.ಎಸ್.ಬಿ.ದೊಡಮನಿ, ಎನ್.ಎಸ್.ಹಳ್ಳಿ, ಆಡಳಿತಾಧಿಕಾರಿ ಐ.ಎಸ್.ಕಾಳಪ್ಪನವರ, ಜಗದೀಶ ಗಲಗಲಿ, ಪ್ರೊ. ಬಿ. ಎಚ್. ಹಿರೇಮಠ, ಪ್ರೊ.ಡಿ.ಬಿ.ಭಜಂತ್ರಿ, ಗಂಗಾಧರ ಸಾಲಕ್ಕಿ, ಜಿ.ಡಿ.ಅಕಮಂಚಿ, ಡಾ.ವಿ.ಡಿ.ಐಹೊಳ್ಳಿ, ಪ್ರೊ.ಎ.ಬಿ.ಬೂದಿಹಾಳ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net