ಸಿದ್ಧೇಶ್ವರ ಬ್ಯಾಂಕಿಗೆ 4.75 ಕೋಟಿ ರೂ. ಆದಾಯ

hn-3-2
Published on

ವಿಜಯಪುರ: ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲೊಂದಾದ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ 2020-21ನೇ ಸಾಲಿನಲ್ಲಿ 4.75 ಕೋಟಿ ರೂ. ಆದಾಯ ಹೊಂದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಪ್ರಕಾಶ ಎಸ್. ಬಗಲಿ ತಿಳಿಸಿದ್ದಾರೆ.

ನಗರದ ಸಿದ್ಧೇಶ್ವರ ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಒಂದು ವರ್ಷದಿಂದ ಮಹಾಮಾರಿ ಕರೊನಾದಿಂದ ವ್ಯಾಪಾರ ವಹಿವಾಟಿಗೆ ತೊಂದರೆ ಅನುಭವಿಸಿದ್ದರೂ ಬ್ಯಾಂಕು 4.75 ಕೋಟಿ ರೂ. ಆದಾಯವನ್ನು ಹೆಚ್ಚಿಸಿಕೊಂಡಿದೆ. 565.65 ಕೋಟಿ ರೂ. ಠೇವಣಿ ಸಂಗ್ರಹಿಸಿದ್ದು, 253.73 ಕೋಟಿ ರೂ. ಸಾಲ ಹಾಗೂ ಮುಂಗಡ ವಿತರಿಸಲಾಗಿದೆ. 650.53 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಬ್ಯಾಂಕಿನ ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಶೀಘ್ರ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಎಟಿಎಂ ಕಾರ್ಡ್‌ಗಳನ್ನು ವಿತರಿಸುವ ಕಾರ್ಯ ತೀವ್ರ ಗತಿಯಲ್ಲಿ ನಡೆದಿದೆ. ಆರ್‌ಟಿಜಿಎಸ್, ಎನ್‌ಇಎ್ಟಿ ಹಾಗೂ ಎಸ್‌ಎಂಎಸ್ ಸೇವೆ ಒದಗಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಬ್ಯಾಂಕಿನ ಉಪಾಧ್ಯಕ್ಷೆ ಬೋರಮ್ಮ ಗೊಬ್ಬೂರ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net