ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ಜಿಲ್ಲೆಯ ಕಾನೂನು ಸುವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಪೊಲೀಸರ ಕಾರ್ಯ ಅಪ್ರತಿಮವಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸುರಕ್ಷತೆ ಕಾಪಾಡಿ ಸಮಾಜದಲ್ಲಿ ನೆಮ್ಮದಿಯ ಜೀವನಕ್ಕೆ ಕಾರಣವಾಗಿದೆ. ಪೊಲೀಸರ ಕಾರ್ಯ ಸರಳವಲ್ಲ ಅದೊಂದು ಅತ್ಯಂತ ಕಠಿಣ ಕೆಲಸ. ತಂತ್ರಜ್ಞಾನ ಯುಗದಲ್ಲಿ ಅಪರಾಧ ಪ್ರಕರಣಗಳ ಸ್ವರೂಪ ಬೇರೆ ಬೇರೆಯಾಗಿದೆ. ಪೊಲೀಸ್ ಸೇವೆ ಸ್ವರೂಪ ಗಮನಾರ್ಹ ಬದಲಾವಣೆಯಾಗಿದ್ದು, ತಂತ್ರಜ್ಞಾನದ ಬಗ್ಗೆ ತರಬೇತಿ ನೀಡಿ, ತಂತ್ರಜ್ಞಾನದ ಬಳಕೆಯಿಂದ ಅಪರಾಧಗಳ ಪ್ರಕರಣಗಳನ್ನು ಭೇದಿಸಲು ಸಹಾಯಕವಾಗಿದೆ ಎಂದರು.