ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಹೆಸರಲ್ಲಿ ಅಧಿಕಾರಕ್ಕೆ ಬಂದ ಈ ಸರ್ಕಾರ ಆ ಸಮುದಾಯಕ್ಕೆ ನ್ಯಾಯ ಒದಗಿಸಿಲ್ಲ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ 25 ಸಾವಿರ ಕೋಟಿ ಹಣ ಗ್ಯಾರಂಟಿಗೆ ಬಳಸುವ ಮೂಲಕ ಆ ಸಮುದಾಯಗಳಿಗೆ ಅನ್ಯಾಯವೆಸಗಿದರು. ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ, ಸ್ಮಾರ್ಟ್ ಮೀಟರ್ ಹಗರಣ, ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಹಾಯಧನಕ್ಕೆ ಕೊಕ್ಕೆ, ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ ಕೊಕ್ಕೆ ಸೇರಿದಂತೆ ಅನೇಕ ಅನ್ಯಾಯಗಳ ಪಟ್ಟಿ ಬೆಳೆಯುತ್ತಲೇ ಇದೆ. 2024 ನೇ ಸಾಲಿನಲ್ಲಿ ರಾಜ್ಯದಲ್ಲಿ 340 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಒಟ್ಟು 1500 ಕೊಲೆ, ಹಲ್ಲೆ, ವಂಚನೆ, ದರೋಡೆ ಪ್ರಕರಣಗಳು ದಾಖಲಾಗಿದ್ದು, ಇವುಗಳೇ ಕಾಂಗ್ರೆಸ್‌ನ ಸಾವಿರ ದಿನಗಳ ಸಾಧನೆ ಎಂದು ಟೀಕಿಸಿದರು.