ನೀಟ್ ಯುಜಿ-2026 ಪ್ರಶ್ನೆ ಪತ್ರಿಕೆ ಸೋರಿಕೆಗೆ ಖಂಡನೆ, ಎಬಿವಿಪಿಯಿಂದ ಬೃಹತ್ ಪ್ರತಿಭಟನೆ

ವಿಜಯಪುರ ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೇಂದ್ರೀಯ ಕಾರ್ಯ ಸಮಿತಿ ಸದಸ್ಯ ಸಚಿನ ಕುಳಗೇರಿ, ಸಜ್ಞಾತಾ ಕುಲಕರ್ಣಿ, ಹರ್ಷ ನಾಯಕ ಇತರರಿದ್ದಾರೆ.
ವಿಜಯಪುರ ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೇಂದ್ರೀಯ ಕಾರ್ಯ ಸಮಿತಿ ಸದಸ್ಯ ಸಚಿನ ಕುಳಗೇರಿ, ಸಜ್ಞಾತಾ ಕುಲಕರ್ಣಿ, ಹರ್ಷ ನಾಯಕ ಇತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯ
  • ನೂರಾರು ಕಾರ್ಯಕರ್ತರಿಂದ ಆಗ್ರಹ
  • ವಿದ್ಯಾರ್ಥಿಗಳ ಕನಸ್ಸು ನುಚ್ಚು ನೂರು
ವಿಜಯಪುರ: ನೀಟ್ ಯುಜಿ-2026ರ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಪ್ರಕರಣ ಖಂಡಿಸಿ ಘೋಷಣೆ ಮೊಳಗಿಸಿದರು.
ಎಬಿವಿಪಿಯ ಕೇಂದ್ರೀಯ ಕಾರ್ಯ ಸಮಿತಿ ಸದಸ್ಯ ಸಚಿನ ಕುಳಗೇರಿ ಮಾತನಾಡಿ, ವೈದ್ಯರಾಗಬೇಕು ಎಂಬ ಕನಸ್ಸು ಕಟ್ಟಿಕೊಂಡು 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ, ಪರೀಕ್ಷಾ ಸಂಸ್ಥೆಯ ನಿರ್ಲಕ್ಷೃದಿಂದ ವಿದ್ಯಾರ್ಥಿಗಳ ಕನಸ್ಸು ನುಚ್ಚು ನೂರಾಗಿದೆ. ಪ್ರವೇಶ ಪರೀಕ್ಷೆಗಳ ಪ್ರಾವಿತ್ರೃತೆ ಮತ್ತು ವಿಶ್ವಾಸಾರ್ಹತೆಯ ಪ್ರಶ್ನೆ ಎದುರಾಗಿದೆ. ಪರೀಕ್ಷಾ ಸಂಸ್ಥೆ ನಡೆ ಖಂಡನೀಯ ಎಂದರು.
ದೇಶದ ಲಕ್ಷಾಂತರ ವಿದ್ಯಾರ್ಥಿಗಳು ನೀಟ್ ನಂತಹ ಪರೀಕ್ಷೆಗಳಿಗೆ ಹಲವು ವರ್ಷಗಳ ಪರಿಶ್ರಮದೊಂದಿಗೆ ಹಾಜರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳು ನಡೆದರೆ ವಿದ್ಯಾರ್ಥಿಗಳ ಮನೋಬಲ ಕುಸಿಯುವುದಲ್ಲದೇ ಅವರ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರ ವಿರುದ್ಧ ಹಾಗೂ ಎನ್‌ಟಿಎ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ರಾಜ್ಯ ಸಹ ಕಾರ್ಯದರ್ಶಿ ಸಜ್ಞಾತಾ ಕುಲಕರ್ಣಿ ಮಾತನಾಡಿ, ಪರೀಕ್ಷಾ ಸಂಸ್ಥೆಯು ಸಿಬಿಐ ತನಿಖೆಗೆ ಸಂಪೂರ್ಣ ಸಹಕಾರ ನೀಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯ ಮಾಡಿದರು.
ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷ ನಾಯಕ, ಜಿಲ್ಲಾ ಸಂಚಾಲಕ ಸಂದೀಪ ಅರಳಗುಂಡಿ, ಬಾಲಾಜಿ ಬಿರಾದಾರ, ಬಸನಗೌಡ ಕೊನರಡ್ಡಿ, ಶಶಿ ಮಾಲಿಪಾಟೀಲ, ನಾಗರಾಜ ದೇಸಾಯಿ, ಅಕ್ಷಯಕುಮಾರ, ನೀಲಮ್ಮ ತಳವಾರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net