ವರದಕ್ಷಿಣೆ ಪ್ರಕರಣಗಳಿಗೆ ಕ್ರಮ ಕೈಗೊಳ್ಳಲಿ

ಮುದ್ದೇಬಿಹಾಳ ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಇಲಾಖೆ, ಸರ್ಕಾರಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸಚಿನ ಕೌಶಿಕ್ ಉದ್ಘಾಟಿಸಿದರು. ಶಶಿಕಾಂತ ಮಾಲಗತ್ತಿ, ವಕೀಲೆ ಹಸೀನಾ ಅನಂತಪೂರ, ಹಿರಿಯ ಸಿವಿಲ್ ನ್ಯಾಯಾಽÃಶ ರವೀಂದ್ರಕುಮಾರ ಕಟ್ಟಿಮನಿ ಮತ್ತಿತರರಿದ್ದರು.
ಮುದ್ದೇಬಿಹಾಳ ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಇಲಾಖೆ, ಸರ್ಕಾರಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸಚಿನ ಕೌಶಿಕ್ ಉದ್ಘಾಟಿಸಿದರು. ಶಶಿಕಾಂತ ಮಾಲಗತ್ತಿ, ವಕೀಲೆ ಹಸೀನಾ ಅನಂತಪೂರ, ಹಿರಿಯ ಸಿವಿಲ್ ನ್ಯಾಯಾಽÃಶ ರವೀಂದ್ರಕುಮಾರ ಕಟ್ಟಿಮನಿ ಮತ್ತಿತರರಿದ್ದರು.
Published on
ಮುದ್ದೇಬಿಹಾಳ ; ವರದಕ್ಷಿಣೆ ನೀಡುವುದು ಮತ್ತು ಪಡೆಯುವುದು ಎರಡೂ ಕಾನೂನು ಬಾಹಿರ, ಇಂತಹ ಪ್ರಕರಣ ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಸಚಿನ ಕೌಶಿಕ್ ಹೇಳಿದರು.
ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಇಲಾಖೆ ಹಾಗೂ ಇತರ ಸರ್ಕಾರಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವರದಕ್ಷಿಣೆ ಒಂದು ಸಾಮಾಜಿಕ ಪಿಡುಗು, ಈ ಪಿಡುಗನ್ನು ಬುಡ ಸಮೇತ ನಿರ್ಮೂಲನೆ ಮಾಡಲು ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಕಾಯ್ದೆ ಜಾರಿಯಾಗಿ ತಂದು ಸಾಕಷ್ಟು ವರ್ಷಗಳಾದರೂ ಸಹ ವರದಕ್ಷಿಣೆ ಪ್ರಕರಣಗಳು ಇನ್ನೂ ಬೆಳಕಿಗೆ ಬರುತ್ತಿರುವುದು ವಿಷಾದನೀಯ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಕಾನೂನು ಬಾಹಿರ ಚಟುವಟಿಕೆ ನಡೆಸುವರ ವಿರುದ್ಧ ತಕ್ಷಣ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಕ್ಷಿಸಿ ಕಾನೂನಿನ ಬಲವನ್ನು ಹೆಚ್ಚಿಸಿದಲ್ಲಿ ಮಾತ್ರ ವರದಕ್ಷಿಣೆ ಪ್ರಕರಣಗಳನ್ನು ತಡೆಗಟ್ಟಬಹುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಸಂಯೋಜಕಿ ಭಾರತಿ ಪಾಟೀಲ ಮಾತನಾಡಿ, ವರದಕ್ಷಿಣೆಗಾಗಿ ಹೆಣ್ಣಿನ ಮೇಲೆ ನಿರಂತರ ಶೋಷಣೆ ನಡೆಯುತ್ತಲೇ ಬಂದಿದೆ. ಎಷ್ಟೋ ಹೆಣ್ಣು ಮಕ್ಕಳನ್ನು ಸುಟ್ಟ ಉದಾಹರಣೆಗಳು ಇವೆ. ಇಷ್ಟಾದರೂ ಸಮಾಜ ಎಚ್ಚೆತ್ತುಕೊಳ್ಳದಿರುವುದು ಬೇಸರದ ಸಂಗತಿ.
ಯುವ ಪೀಳಿಗೆ ವರದಕ್ಷಿಣೆ ನಿಷೇಧ ಕಾಯ್ದೆಯನ್ನು ಬೆಂಬಲಿಸಬೇಕು. ತಮ್ಮ ಮದುವೆಯಲ್ಲಿ ವರದಕ್ಷಿಣೆ ಪಡೆಯುವುದಿಲ್ಲ ಎಂದು ಶಪಥ ಮಾಡಬೇಕು. ಹೆಣ್ಣು ಮಕ್ಕಳಿಗೆ ವರದಕ್ಷಿಣೆ ಕೇಳಿದಾಗ ಸಂಬಂಧಿಸಿದ ಅಽಕಾರಿಗಳಿಗೆ, ಪೊಲೀಸರಿಗೆ ದೂರು ನೀಡಲು ಮುಂದಾಗಬೇಕು ಆಗ ಈ ಪಿಡುಗನ್ನು ಹೋಗಲಾಡಿಸಲು ಸಾಧ್ಯ ಎಂದರು.
ನ್ಯಾಯವಾದಿ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ವಕೀಲೆ ಹಸೀನಾ ಅನಂತಪೂರ, ಹಿರಿಯ ಸಿವಿಲ್ ನ್ಯಾಯಾಧಿಶ ರವೀಂದ್ರಕುಮಾರ ಕಟ್ಟಿಮನಿ, ಸಿವಿಲ್ ನ್ಯಾಯಾಧಿಶ ರಾಮಮೂರ್ತಿ ಎನ್., ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ, ನ್ಯಾಯವಾದಿ ಸಂಘದ ಪ್ರ. ಕಾರ್ಯದರ್ಶಿ ಪಿ.ಬಿ. ಗೌಡರ, ಕ್ಷೇತ್ರ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಜೆ. ದಖನಿ ಮತ್ತಿತರರಿದ್ದರು.

ವರದಕ್ಷಿಣೆ ಕಾಯ್ದೆಯ ಪ್ರಕಾರ ವರದಕ್ಷಣೆ ನೀಡುವುದು ಮತ್ತು ಸ್ವೀಕರಿಸಿದರೆ, ಕನಿಷ್ಠ 5 ವರ್ಷಗಳ ಶಿಕ್ಷೆ ಹಾಗೂ 15ಸಾವಿರ ರೂ ದಂಡ ವಿಧಿಸಲಾಗುತ್ತದೆ. ಅಲ್ಲದೆ, ವರದಕ್ಷಿಣೆ ಕೇಳಿದರೆ 6 ತಿಂಗಳಿAದ 2 ವರ್ಷಗಳವರೆಗೆ ಶಿಕ್ಷೆ ವಿಽಸುವ ವ್ಯವಸ್ಥೆ ಇದೆ.

— | ಸಚಿನ ಕೌಶಿಕ್, ಅಧ್ಯಕ್ಷರು, ತಾಲೂಕು ಕಾನೂನು ಸೇವಾ ಸಮಿತಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net