ತಾಳಿಕೋಟೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆ ರಸಗೊಬ್ಬರ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದ್ದು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಽಕಾರಿಗೆ ಮನವಿ ಸಲ್ಲಿಸಲಾಯಿತು. ಬಾಪುಗೌಡ ಪಾಟೀಲ, ಸಹದೇವಪ್ಪ ದೊಡಮನಿ, ಹಣಮಂತ ಗುತ್ತೇದಾರ ಮತ್ತಿತರರಿದ್ದರು.
Published on:
Copied
Follow Us
ವಿಜಯವಾಣಿ ಸುದ್ದಿಜಾಲ, ತಾಳಿಕೋಟೆ
ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರಂಭವಾಗುತ್ತಿದ್ದು ಈಗಾಗಲೇ ರಸಗೊಬ್ಬರ ಲಭ್ಯವಿಲ್ಲಾವೆಂದು ಖಾಸಗಿ ಮಾರಾಟ ಮಳಿಗೆಗಳಲ್ಲಿ ನಾಮ ಫಲಕ ಹಾಕಿ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆ ರಸಗೊಬ್ಬರ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದ್ದು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಸಂಘಟನೆ ಜಿಲ್ಲಾ ಅಧ್ಯಕ್ಷ ಬಸವರಾಜ ಸಿಂಗನಹಳ್ಳಿ ಮಾತನಾಡಿ, ರೈತರು ಬಿತ್ತನೆಗಾಗಿ ಬೀಜ ಹಾಗೂ ರಸಗೊಬ್ಬರ ಖರೀದಿಸಲು ರೈತ ಸಂಪರ್ಕ ಕೇಂದ್ರಗಳಿಗೆ ಹಾಗೂ ಖಾಸಗಿ ಮಾರಾಟ ಮಳಿಗೆಗಳಿಗೆ ತೆರಳುತ್ತಿದ್ದಾರೆ. ರಸಗೊಬ್ಬರ ಲಭ್ಯ ಇಲ್ಲಾವೆಂದು ನಾಮಫಲಕ ಹಾಕಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಇದರಿಂದ ಬಡ ಮತ್ತು ಮಧ್ಯಮ ವರ್ಗದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದು ಕೃಷಿ ಚಟುವಟಿಕೆ ಮೇಲೆ ದುಷ್ಪರಿಣಾಮ ಬೀರುತ್ತಿದೆ, ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ. ಜಿಲ್ಲೆಯ ಎಲ್ಲ ರೈತ ಸಂಪರ್ಕ ಕೇಂದ್ರಗಳ ಮುಂದೆ ಕಡ್ಡಾಯವಾಗಿ ಬೀಜ ರಸಗೊಬ್ಬರಗಳ ದರಪಟ್ಟಿ ಮತ್ತು ಲಭ್ಯವಿರುವ ಸ್ಟಾಕ್ ವಿವರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವಂತೆ ಕ್ರಮ ವಹಿಸಬೇಕು ಹಾಗೆಯೇ ಹತ್ತಿ ಬೀಜ ಸೇರಿ ಇತರೆ ಎಲ್ಲಾ ಬೀಜಗಳ ಅಽಕೃತ ಮಾರಾಟದ ದರಪಟ್ಟಿಯನ್ನು ಪ್ರದರ್ಶಿಸಿ ಸರ್ಕಾರ ನಿಗದಿಪಡಿಸಿದ ಬೆಲೆಯಲ್ಲಿಯೇ ಮಾರಾಟವಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು.
ಸರ್ಕಾರದ ನಿಯಮ ಉಲ್ಲಂಘಿಸಿ ಹೆಚ್ಚಿನ ಬೆಲೆ ರಸಗೊಬ್ಬರ ಮಾರಾಟ ಮಾಡುವ ಮಳಿಗೆಗಳ ಮೇಲೆ, ವ್ಯಾಪಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಜಿಲ್ಲಾ ಕಾರ್ಯಾಧ್ಯಕ್ಷ ಬಾಪುಗೌಡ ಪಾಟೀಲ, ಸಹದೇವಪ್ಪ ದೊಡಮನಿ, ಹಣಮಂತ ಗುತ್ತೇದಾರ, ರುದ್ರೇಶ ಮುರಾಳ, ಸುರೇಶ ರಾಠೋಡ, ನಿಂಗನಗೌಡ ಬಸರಡ್ಡಿ, ಹಣಮಂತ ತಳ್ಳೋಳ್ಳಿ, ಸಂತೋಷ ಹೆಗರಡ್ಡಿ ಇತರರಿದ್ದರು.