ಐತಿಹಾಸಿಕ ಗೋಳಗುಮ್ಮಟದಿಂದ ಹಕೀಮ್ ಚೌಕ್‌ವರೆಗೆ 2 ಕೋಟಿ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಬಳಿಕ ವಾರ್ಡ್ ನಂ.18 ರಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಹಾಗೂ ಹರಿಣಶಿಖಾರಿ ಓಣಿಯಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿದರು. ಅಲ್ಲಿಂದ ನೇರವಾಗಿ ಕಾಸಗೇರಿ ಖಾದಿ ಗ್ರಾಮೋದ್ಯೋಗ ಮಾರ್ಗವಾಗಿ ಮುಬೀನ್ ಸರ್ಕಲ್, ಅಥಣಿ ಗಲ್ಲಿ ಮುಖಾಂತರ ಕೇಂದ್ರ ಬಸ್ ನಿಲ್ದಾಣವರೆಗೆ ಒಳಚರಂಡಿ, ಮಳೆ ನೀರು ಚರಂಡಿ, ಅಲಂಕಾರಿಕ ಬೀದಿ ದೀಪ ಅಳವಡಿಸಿ ರಸ್ತೆ ಅಭಿವದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದರು. ನಾಗಠಾಣ ಶಾಸಕ ವಿಠಲ ಕಟಕದೊಂಡ, ನಗರಾಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಮಹಾಪೌರ ಎಂ.ಎಸ್. ಕರಡಿ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಇತರರಿದ್ದರು.