ಕರ್ನಾಟಕ ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿ ಸದಸ್ಯೆ ಸುರೇಖಾ ಲಮಾಣಿ ಮಾತನಾಡಿ, ದೇವನೂರು ಮಹಾದೇವಪ್ಪ ಅವರು ಹೇಳಿದಂತೆ ‘ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ ಯಾವತ್ತಿಗೂ ಫಲ ಕೊಡುತ್ತದೆ’ ಎನ್ನುವಂತೆ ಅಕ್ಷರದ ಜೊತೆ ಜೊತೆಗೆ ಮಕ್ಕಳಿಗೆ ನೃತ್ಯದ ತರಬೇತಿ ನೀಡಿದ್ದು, ಈ ತರಬೇತಿ ಜೀವನದಲ್ಲಿ ಮುಂದುವರೆಸಿಕೊಂಡು ಉನ್ನತ ಮಟ್ಟದಲ್ಲಿ ಬೆಳೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದರು.