24ರಂದು ಬಬಲೇಶ್ವರ ತಾಲೂಕು ಶರಣು ಸಾಹಿತ್ಯ ಸಮ್ಮೇಳನ

ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಜ. 24ರಂದು ಬಬಲೇಶ್ವರ ತಾಲೂಕು ಪ್ರಥಮ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಜ. 24ರಂದು ಬಬಲೇಶ್ವರ ತಾಲೂಕು ಪ್ರಥಮ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ.
Published on
ವಿಜಯಪುರ : ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಜ. 24ರಂದು ಬಬಲೇಶ್ವರ ತಾಲೂಕು ಪ್ರಥಮ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಜಿಲ್ಲಾ ಮತ್ತು ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗುಣದಾಳದ ವಿವೇಕಾನಂದ ದೇವರು ಆಯ್ಕೆಯಾಗಿದ್ದಾರೆ.
ಅಂದು ಬೆಳಗ್ಗೆ 8.30ಕ್ಕೆ ಗ್ರಾ.ಪಂ. ಅಧ್ಯಕ್ಷ ಮಲಕನಗೌಡ ಪಾಟೀಲರು ರಾಷ್ಟçಧ್ವಜ ಮತ್ತು ಸೋಕ್ಕೆಯ ಸಾರಂಗಪ್ಪಯ್ಯ ಸ್ವಾಮಿಗಳು ಪರಿಷತ್ ಧ್ವಜಾರೋಹಣ ನೆರವೇರಿಸುವರು.
ಬೆಳಗ್ಗೆ 9ಕ್ಕೆ ಸಾರವಾಡ ಗ್ರಾಮದ ಬಸ್ ನಿಲ್ದಾಣದಿಂದ ಈಶ್ವರ ದೇವಸ್ಥಾನದವರೆಗೆ ಸಮ್ಮೆಳನಾಧ್ಯಕ್ಷರ ಮೆರವಣಿಗೆ ಜರುಗಲಿದೆ. ಅಭಿನವ ಮುರುಗೇಶ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಎಂ.ಐ. ಕೋಟಿ ಮತ್ತು ಕೆ.ಐ. ಪಾರಶೆಟ್ಟಿ ಮೆರವಣಿಗೆಗೆ ಚಾಲನೆ ನೀಡುವರು. ಬೆಳಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವನ್ನು ಇಲಕಲ್ಲದ ಗುರು ಮಹಾಂತ ಪೂಜ್ಯರು ವಹಿಸುವರು. ಬಬಲೇಶ್ವರದ ಡಾ. ಮಹಾದೇವ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಸಮ್ಮೇಳನ ಉದ್ಘಾಟಿಸುವರು.
ಸಚಿವ ಶಿವಾನಂದ ಪಾಟೀಲ ಈಶ್ವರ ಪ್ರಭೆ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರರು ಪುಸ್ತಕ ಮಳಿಗೆ ಮತ್ತು ಪ್ರಥಮ ದರ್ಜೆ ಗುತ್ತಿಗೆದಾರ ಸದಾಶಿವ ಚಿಕ್ಕರಡ್ಡಿಯವರು ದಾಸೋಹ ಮನೆಯನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ವಿ.ಸಿ. ನಾಗಠಾಣ, ವಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಮತ್ತು ತಾಲೂಕು ಕದಳಿ ಮಹಿಳಾ ಅಧ್ಯಕ್ಷೆ ಜಯಶ್ರೀ ಪಾಟೀಲ ಭಾಗವಹಿಸುವರು. ಪರಿಷತ್‌ನ ಜಿಲ್ಲಾಧ್ಯಕ್ಷ ಜಂಬುನಾಥ ಕಂಚ್ಯಾಣಿ ಪ್ರಾಸ್ತಾವಿಕವಾಗಿ ನುಡಿಗಳನ್ನಾಡುವರು.
ಮಧ್ಯಾಹ್ನದ ನಡೆಯುವ ಶರಣ ಚಿಂತನೆ ಗೋಷ್ಠಿಯಲ್ಲಿ ಅಕ್ಕಮಹಾದೇವಿ ವಿವಿ ಡಾ. ಎಂ.ಎಸ್. ಮುಜಾವರ ಮತ್ತು ಯುವ ವಾಗ್ಮಿ ಅಶೋಕ ಹಂಚಲಿ ಉಪನ್ಯಾಸ ನೀಡುವರು. ಡಾ. ವಿ.ಡಿ. ಐಹೊಳ್ಳಿ ಅಧ್ಯಕ್ಷತೆ ವಹಿಸುವರು.
ನಂತರ ನಡೆಯುವ ಎರಡನೇ ವಿಶೇಷ ಗೋಷ್ಠಿಯಲ್ಲಿ ಪ್ರೊ. ಬಿ.ಎನ್. ಪಾಟೀಲ ಇಬ್ರಾಹಿಂಪೂರ ಅವರು ಜನಪದ ಸಾಹಿತ್ಯದಲ್ಲಿ ಶರಣರು ಕುರಿತು ಉಪನ್ಯಾಸ ನೀಡುವರು. ಮೂರನೇ ವಚನವಾಚನ ಗೋಷ್ಠಿಯಲ್ಲಿ ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಆಧ್ಯಕ್ಷೆ ಡಾ. ಉಷಾದೇವಿ ಹಿರೇಮಠ ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿಗಳಾದ ಬಿ.ಎಂ. ಪಾಟೀಲ ಉಪಸ್ಥಿತಿ ವಹಿಸುವರು. ನಂತರ ಆಧುನಿಕ ವಚನಕಾರರು ಸ್ವರಚಿತ ವಚನಗಳನ್ನು ಪ್ರಸ್ತುತ ಪಡಿಸಲಿದ್ದಾರೆ.
ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕಾಖಂಡಕಿಯ ಶಿವಯೋಗೇಶ್ವರ ಸ್ವಾಮೀಜಿ ಮತ್ತು ನಿಡೊಣಿಯ ಸಿದ್ಧಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ಹಾಗೂ ಅಭಿನವ ಮುರುಘೇಂದ್ರ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ. ಸಂಸದ ರಮೇಶ ಜಿಗಜಿಣಗಿ ಅಧ್ಯಕ್ಷತೆ ವಹಿಸುವರು. ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net