ಬಬಲೇಶ್ವರ-ವಿಜಯಪುರ ಕ್ಷೇತ್ರ ಟಾರ್ಗೆಟ್

ವಿಜಯಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ಸಭಾಂಗಣದಲ್ಲಿ ಜಿ¯್ಲÁ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಕಾರ್ಯಾಗಾರವನ್ನು ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಜಿ¯್ಲÁಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಶಾಸಕ ವಿಠಲ ಕಟಕದೊಂಡ ಇತರರಿದ್ದಾರೆ.
ವಿಜಯಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ಸಭಾಂಗಣದಲ್ಲಿ ಜಿ¯್ಲÁ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಕಾರ್ಯಾಗಾರವನ್ನು ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಜಿ¯್ಲÁಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಶಾಸಕ ವಿಠಲ ಕಟಕದೊಂಡ ಇತರರಿದ್ದಾರೆ.
Published on
ವಿಜಯಪುರ: `ರಾಜ್ಯದಲ್ಲಿ ೧೩೫ಕ್ಕೂ ಅಽಕ ವಿಧಾನ ಸಭೆ ಕ್ಷೇತ್ರಗಳ ಪೈಕಿ ೯೭ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಅದರಲ್ಲಿ ವಿಜಯಪುರ ನಗರ ಕ್ಷೇತ್ರ ಹಾಗೂ ಬಬಲೇಶ್ವರವೂ ಇದೆ' ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಗೆ ಮತ್ತು ಮೂಲ ಸೌಕರ್ಯ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ನಗರದ ಕಿತ್ತೂರು ರಾಣಿ ಚನ್ನಮ್ಮ ಸಭಾಂಗಣದಲ್ಲಿ ಜಿ¯್ಲÁ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನೆಪದಲ್ಲಿ ಮತದಾನದ ಹಕ್ಕಿನ ಮೇಲೆ ದಾಳಿ ಮಾಡಲಾಗುತ್ತಿದೆ ಎಂದರು.

`ಮತದಾರರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ವ್ಯವಸ್ಥಿತ ಕುತಂತ್ರ ನಡೆಯುತ್ತಿದೆ. ಅಲ್ಪಸಂಖ್ಯಾತರ, ಶೋಷಿತರ ಮತಗಳನ್ನು ಕಸಿಯುವುದಷ್ಟೇ ಅಲ್ಲದೇ, ಕಾಂಗ್ರೆಸ್ ಬೆಂಬಲಿಗ ಮತದಾರರನ್ನು ಗುರುತಿಸಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಹುನ್ನಾರ ನಡೆದಿದೆ' ಎಂದು ದೂರಿದರು.

`ದೇಶದ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಎಸ್‌ಐಆರ್ ಪ್ರಕ್ರಿಯೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಅದೇ ರೀತಿ ಈಗ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲಕರವಾಗಿ ೯೭ ಕ್ಷೇತ್ರಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.

ಆಯಾ ಮತಕ್ಷೇತ್ರಗಳಲ್ಲಿ ನಿರ್ದಿಷ್ಟ ಸಮುದಾಯದ ಮತದಾರರನ್ನು ಪಟ್ಟಿಯಿಂದಲೇ ಕೈಬಿಡುವ ಷಡ್ಯಂತ್ರ ನಡೆದಿದೆ. ಜತೆಗೆ ಕಾಂಗ್ರೆಸ್‌ಗೆ ಮತಹಾಕುವ ಮತದಾರರನ್ನೂ ಇದರಲ್ಲಿ ಗುರಿಯಾಗಿಸಲಾಗಿದೆ. ಎಂ.ಬಿ.ಪಾಟೀಲರಿಗೆ ಮತಹಾಕುವ ಲಿಂಗಾಯತರನ್ನೂ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ. ಇಂತಹ ಪ್ರಜಾಪ್ರಭುತ್ವ ವಿರೋಽ ಕೃತ್ಯ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ' ಎಂದರು.

`ಕಳೆದ ಬಾರಿ ವಿಜಯಪುರ ನಗರ ಮತಕ್ಷೇತ್ರ ದಲ್ಲಿ ಬೇರೆ ಬೇರೆ ಭಾಗಗಳಿಂದ ೧೦ ಸಾವಿರ ಜನರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿತ್ತು. ಇದೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣವಾಯಿತು. ಅದೇ ರೀತಿ ಎಸ್‌ಐಆರ್ ನೆಪದಲ್ಲಿ ನಿರ್ದಿಷ್ಟ ಮತಕ್ಷೇತ್ರದಲ್ಲಿ ಮತದಾರರನ್ನು ಸೇರಿಸುವ ಅಥವಾ ಕೈಬಿಡುವ ಕಾರ್ಯ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಎಸ್‌ಐಆರ್ ಬಗ್ಗೆ ಮೈಮರೆತರೆ ಗಂಡಾAತರದ ತಪ್ಪಿದ್ದಲ್ಲ' ಎಂದರು.

ಅಷ್ಟೇ ಅಲ್ಲ, `ಸರ್ಕಾರದ ಪಡಿತರ ವ್ಯವಸ್ಥೆ, ಪಂಚ ಗ್ಯಾರಂಟಿಗಳು ಸೇರಿ ಯಾವುದೇ ಸಾಮಾಜಿಕ ನ್ಯಾಯದ ಯೋಜನೆಗಳಿಂದಲೂ ಅರ್ಹರು ವಂಚಿತರಾಗಬೇಕಾಗುತ್ತದೆ. ಹೀಗಾಗಿ ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ. ಪಕ್ಷದ ಕಾರ್ಯಕರ್ತರು ಹಾಗೂ ಮತದಾರರು ಅತ್ಯಂತ ಎಚ್ಚರಿಕೆಯಿಂದಿದ್ದು, ಯಾವುದೇ ಅನ್ಯಾಯ, ದುರುಪಯೋಗ ನಡೆಯದಂತೆ ನಿಗಾ ವಹಿಸಬೇಕು' ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಕ್ಷದ ಬಿಎಲï‌ಒ ಆಗಿ ನೇಮಕಗೊಂಡವರು ಹೆಚ್ಚಿನ ಜಾಗೃತಿ ವಹಿಸಬೇಕು. ಉತ್ತಮ ಕೆಲಸ ಮಾಡಿದವರಿಗೆ ಗುರುತಿಸಿ, ಅವರಿಗೆ ವಿಶೇಷವಾಗಿ ಸನ್ಮಾನ ಹಾಗೂ ಬಹುಮಾನ ನೀಡಲಾಗುತ್ತದೆ. ರಾಜಕೀಯವಾಗಿಯೂ ಬೆಳೆಸುವ ಕೆಲಸವನ್ನೂ ಮಾಡುತ್ತೇವೆ. ಇಲ್ಲವಾದರೆ, ಶಿಸ್ತುಕ್ರಮಕ್ಕಾಗಿ ಪಕ್ಷಕ್ಕೆ ವರದಿ ನೀಡಲಾಗುವುದು' ಎಂದರು.

ಜಿ¯್ಲÁಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಶಾಸಕ ವಿಠಲ ಕಟಕದೊಂಡ, ಮಾಜಿ ಶಾಸಕ ಪ್ರೊ. ರಾಜು ಆಲಗೂರ, ರಾಜ್ಯ ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಎಸ್.ಎಂ.ಪಾಟೀಲ ಗಣಿಹಾರ ಇತರರಿದ್ದರು.


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net