ಬಿಎಲ್‌ಡಿಇ ಸಂಸ್ಥೆ ಬಡವರ ಪಾಲಿಗೆ ಭಾಗ್ಯವಿದ್ದಂತೆ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ವಿಜಯಪುರದಲ್ಲಿ ಬಿಎಲ್‌ಡಿಇ ಸಂಸ್ಥೆಯ ನಿರ್ದೇಶಕ ಬಸನಗೌಡ ಪಾಟೀಲ ಸನ್ಮಾನಿಸಿ ಆರ್ಥಿಕ ನೆರವು ನೀಡಿದರು. ಸಿ.ಕೆ. ಹೊಸಮನಿ, ಆರ್.ವಿ. ಕುಲಕರ್ಣಿ, ಐ.ಎಸ್. ಕಾಳಪ್ಪನವರ ಮತ್ತಿತರರಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ವಿಜಯಪುರದಲ್ಲಿ ಬಿಎಲ್‌ಡಿಇ ಸಂಸ್ಥೆಯ ನಿರ್ದೇಶಕ ಬಸನಗೌಡ ಪಾಟೀಲ ಸನ್ಮಾನಿಸಿ ಆರ್ಥಿಕ ನೆರವು ನೀಡಿದರು. ಸಿ.ಕೆ. ಹೊಸಮನಿ, ಆರ್.ವಿ. ಕುಲಕರ್ಣಿ, ಐ.ಎಸ್. ಕಾಳಪ್ಪನವರ ಮತ್ತಿತರರಿದ್ದಾರೆ.
Published on
ವಿಜಯಪುರ: ಬಿಎಲ್‌ಡಿಇ ಸಂಸ್ಥೆ ಜಿಲ್ಲೆಯ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸದಾ ನೆರವು ನೀಡುತ್ತ ಬಂದಿದೆ ಎಂದು ಬಿಎಲ್‌ಡಿಇ ಸಂಸ್ಥೆಯ ನಿರ್ದೇಶಕ ಬಸನಗೌಡ ಪಾಟೀಲ ಹೇಳಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಎಸ್‌ಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಾನಿಕಾ ಮೆಟಗಾರ, ತೃತೀಯ ಸ್ಥಾನ ಪಡೆದ ಅಕ್ಷತಾ ಚವಾಣ್ ಮತ್ತು ಬರಡೋಲ ಸರ್ಕಾರಿ ಪಿಯು ಕಾಲೇಜಿನ ಲಷ್ಮ್ಮೀ ಶ್ರೀಕಾಂತ ನಂದೂರ ಹಾಗೂ ನಾಲ್ಕನೇ ಸ್ಥಾನ ಪಡೆದ ಎಸ್‌ಎಸ್ ಪಿಯು ಕಾಲೇಜಿನ ವಿದ್ಯಾರ್ಥಿ ಯುವರಾಜ ಬಗಲಿ ಅವರನ್ನು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಮತ್ತು ಆರ್ಥಿಕ ನೆರವು ನೀಡಿ ಅವರು ಮಾತನಾಡಿದರು.
ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆ ಕಳೆದ ಶೈಕ್ಷಣಿಕ ವರ್ಷದಲ್ಲಿ 29ನೇ ಸ್ಥಾನದಲ್ಲಿತ್ತು. ಈ ಹಿನ್ನೆಲೆಯಲ್ಲಿ ಬೋಧನೆ ಗುಣಮಟ್ಟ ಸುಧಾರಿಸಿ, ಪರೀಕ್ಷೆಗೆ ಸಾಕಷ್ಟು ಪೂರ್ವ ಸಿದ್ಧತೆ ನಡೆಸುವಂತೆ ಸಚಿವ ಎಂ.ಬಿ. ಪಾಟೀಲರು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದರು. ಅದರಂತೆ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಮಂಡಳಿ ಅಽಕಾರಿಗಳು, ಶಿಕ್ಷಕರು ಸಾಕಷ್ಟು ತಯಾರಿ ನಡೆಸುವ ಮೂಲಕ , ವಿದ್ಯಾರ್ಥಿಗಳು ಮತ್ತು ಪೋಷಕರ ಜತೆಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಿದ್ದರು ಎಂದು ತಿಳಿಸಿದರು.
ಇದೆಲ್ಲದರ ಭಾಗವಾಗಿ ಜಲ್ಲೆ ಈ ಬಾರಿ -ಫಲಿತಾಂಶದಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ. ಅಲ್ಲದೇ, ನಾಲ್ಕು ಜನ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ರ‍್ಯಾಂಕ್ ಪಡೆಯುವ ಮೂಲಕ ಬಸವ ನಾಡಿಗೆ ಕೀರ್ತಿ ತಂದಿದ್ದಾರೆ. ಅಂಥ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವ ಎಂ.ಬಿ. ಪಾಟೀಲರು ಬಿಎಲ್‌ಡಿಇ ಸಂಸ್ಥೆ ಮೂಲಕ ಈ ಹಿಂದಿನಿಂದಲೂ ಸಹಾಯ ಮಾಡುತ್ತ ಬಂದಿದ್ದು, ಈ ವರೆಗೆ ನೀಟ್ ಪಾಸಾಗಿ ಸರ್ಕಾರಿ ಕೋಟಾದಡಿ ಸೀಟು ಪಡೆದ ಸುಮಾರು 40ಕ್ಕೂ ಅಽಕ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಿದ್ದಾರೆ ಎಂದು ಅವರು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಕೆ. ಹೊಸಮನಿ ಮಾತನಾಡಿ, ಸಚಿವ ಎಂ.ಬಿ. ಪಾಟೀಲರ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆಯಲ್ಲಿ ಫಲಿತಾಂಶ ಸುಧಾರಣೆಗೆ ಇಲಾಖೆ ವತಿಯಿಂದ ಸಾಕಷ್ಟು ಸಿದ್ಧತೆ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡುವ ಜತೆಗೆ ಎರಡು ಬಾರಿ ಪೂರ್ವ ಸಿದ್ಧತೆ ಪರೀಕ್ಷೆ ನಡೆಸಲಾಗಿತ್ತು. ಅದರ ಪರಿಣಾಮ ಜಿಲ್ಲೆಯ ಫಲಿತಾಂಶ ಹೆಚ್ಚಾಗಿದ್ದು, ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ರ‍್ಯಾಂಕ್ ಪಡೆದಿz್ದÁರೆ ಎಂದು ಮಾಹಿತಿ ನೀಡಿದರು.
ಕಗ್ಗೋಡ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಕೆ.ಎ. ಉಪ್ಪಾರ ಮಾತನಾಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ಕೆ. ಹೊಸಮನಿ ಅವರನ್ನು ಬಸನಗೌಡ ಪಾಟೀಲ ಸನ್ಮಾನಿಸಿ ಗೌರವಿಸಿದರು.
ಬಿಎಲ್‌ಡಿಇ ಡೀಮ್ಡ್ ವಿವಿ ರಿಜಿಸ್ಟಾçರ್ ಆರ್.ವಿ. ಕುಲಕರ್ಣಿ, ಸಂಸ್ಥೆಯ ಆಡಳಿತಾಽಕಾರಿಗಳಾದ ಐ.ಎಸ್. ಕಾಳಪ್ಪನವರ, ಎಸ್.ಎ. ಬಿರಾದಾರ (ಕನ್ನಾಳ), ಬರಡೋಲ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಸುರೇಶ ನಾರಾಯಣಕರ, ಉಪನ್ಯಾಸಕ ಟಿ.ಎಂ. ಪವಾರ ಮತ್ತಿತರರಿದ್ದರು.
ಸಂತೋಷ ಲೋಕುರಿ ಕಾರ್ಯಕ್ರಮ ನಿರ್ವಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net