ಸಂಚಾರ ದಟ್ಟಣೆ ನಿಯಂತ್ರಣ ಮಾಡಲು ವಜ್ರ ಹನುಮಾನ ರೈಲ್ವೆ ಕ್ರಾಸಿಂಗ್ ಬಳಿ ಅಂಡರ್ ಪಾಸ್ ನಿರ್ಮಾಣ ಕಾರ್ಯ ಕೈಗೊಳ್ಳಲು ಅನೇಕ ವರ್ಷಗಳಿಂದ ಸಾರ್ವಜನಿಕರ ಬೇಡಿಕೆ ಇದೆ, ಹೀಗಾಗಿ ಆ ವಿಷಯವಾಗಿ ಪಾಲಿಕೆ, ರೈಲ್ವೆ ಇಲಾಖೆ ಅಽಕಾರಿಗಳ ಸಭೆ ನಡೆಸಿರುವೆ, ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೆಲದ ಆಳದಲ್ಲಿರುವ ನೀರಿನ ಪೈಪ್‌ಲೈನ್ ಜಾಲ, ಟೆಲಿಫೋನ್ ಜಾಲ ಮೊದಲಾದವುಗಳನ್ನು ಸ್ಥಳಾಂತರಿಸುವುದು ಸೇರಿ ವಿವಿಧ ಕಾಮಗಾರಿಗಳಿಗೆ ಆರು ಕೋಟಿ ರೂ. ತಗುಲುವ ಅಂದಾಜಿದೆ. ಈ ಅನುದಾನವನ್ನು ರಾಜ್ಯ ಸರ್ಕಾರ ಭರಿಸಬೇಕು. ಹೀಗಾಗಿ ಈ ಬಗ್ಗೆ ಪ್ರಸ್ತಾವನೆ ಸಿದ್ಧಪಡಿಸಿ ಕಳುಹಿಸುವಂತೆ ಅಧಿಕಾರಿಗಳಿಗೆ ತಿಳಿಸಿರುವೆ, ರಾಜ್ಯ ಸರ್ಕಾರ ಈ ಅನುದಾನ ಬಿಡುಗಡೆ ಮಾಡಿದರೆ ವಜ್ರಹನುಮಾನ ರೈಲ್ವೆ ಗೇಟ್ ಬಳಿ ಅಂಡರ್ ಪಾಸ್ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.