ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ, ಬ್ಯಾಂಕ್ ಅಧಿಕಾರಿಗಳಿಗೆ ಸಿಇಒ ರಿಷಿ ಆನಂದ ಸೂಚನೆ

ವಿಜಯಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಲೀಡ್ ಬ್ಯಾಂಕ್‌ನಿಂದ ಹಮ್ಮಿಕೊಂಡಿದ್ದ ತ್ರೈಮಾಸಿಕ ಸಭೆ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಸಿಇಒ ರಿಷಿ ಆನಂದ ಮಾತನಾಡಿದರು. ಜಿಪಂ ಯೋಜನಾ ನಿರ್ದೇಶಕ ಅಶೋಕ ಕಲಘಟಗಿ, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಬಿ. ಸಿದ್ದಯ್ಯ ಇತರರಿದ್ದಾರೆ.
ವಿಜಯಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಲೀಡ್ ಬ್ಯಾಂಕ್‌ನಿಂದ ಹಮ್ಮಿಕೊಂಡಿದ್ದ ತ್ರೈಮಾಸಿಕ ಸಭೆ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಸಿಇಒ ರಿಷಿ ಆನಂದ ಮಾತನಾಡಿದರು. ಜಿಪಂ ಯೋಜನಾ ನಿರ್ದೇಶಕ ಅಶೋಕ ಕಲಘಟಗಿ, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಬಿ. ಸಿದ್ದಯ್ಯ ಇತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ
  • ಬ್ಯಾಂಕ್ ಮ್ಯಾನೇಜರ್‌ಗಳ ತ್ರೈಮಾಸಿಕ ಸಭೆ
  • ಗ್ರಾಹಕರಲ್ಲಿ ಜಾಗೃತಿ ಮೂಡಿಸಲು ಸಲಹೆ
  • ಸರ್ಕಾರದ ಯೋಜನೆ ತಲುಪಿಸಲು ಸೂಚನೆ
ವಿಜಯಪುರ: ಗ್ರಾಹಕರು ಬ್ಯಾಂಕ್‌ಗೆ ಆಗಮಿಸುವ ಗ್ರಾಹಕರ ಸಮಸ್ಯೆಗಳನ್ನು ಆಲಿಸಬೇಕು. ಸಮರ್ಪಕವಾಗಿ ಸ್ಪಂದಿಸಬೇಕು. ಅವರೊಂದಿಗೆ ಸಹಾನುಭೂತಿಯಿಂದ ಸ್ಪಂದಿಸಬೇಕೆಂದು ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಲೀಡ್ ಬ್ಯಾಂಕ್‌ನಿಂದ ಹಮ್ಮಿಕೊಂಡಿದ್ದ ತ್ರೈಮಾಸಿಕ ಸಭೆ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆರ್‌ಬಿಐ ಮಾರ್ಗಸೂಚಿ ಪ್ರಕಾರ ಬ್ಯಾಂಕ್ ಯೋಜನೆಗಳ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸಬೇಕು ಮತ್ತು ಸೌಲಭ್ಯಗಳ ಕುರಿತು ಮಾರ್ಗದರ್ಶನ ನೀಡಬೇಕು ಎಂದರು.
ಸಾಲ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳುವಂತಿಲ್ಲ. ಬ್ಯಾಂಕ್ ಸಾಲಗಳಿಗೆ ಅರ್ಜಿ ಸಲ್ಲಿಸಿದಾಗ ಒಂದು ವೇಳೆ ದಾಖಲಾತಿಗಳು ಅಪೂರ್ಣ ಇದ್ದಲ್ಲಿ ಗ್ರಾಹಕರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು. ಪ್ರತಿಯೊಬ್ಬ ಗ್ರಾಹಕರ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಲೇಬೇಕು. ಸರ್ಕಾರವು ಜಾರಿಗೊಳಿಸುವ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಬ್ಯಾಂಕ್‌ನಲ್ಲಿ ಅರ್ಹ ಫಲಾನುಭವಿಗಳ ದಾಖಲೆ ಅನುಸಾರ ಬ್ಯಾಂಕ್ ಸಾಲ ಸೌಲಭ್ಯ ಅರ್ಜಿ ಪರಿಶೀಲನೆ ನಡಸಿ ಬೇಗ ಇತ್ಯರ್ಥಗೊಳಿಸಬೇಕು. ಎಲ್ಲ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳುವಂತೆ ಫಲಾನುಭವಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.
ವಿವಿಧ ಇಲಾಖೆಗಳಡಿ ಇರುವ ಯೋಜನೆಗಳಾದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‌ಆರ್‌ಎಲ್‌ಎಂ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಇರುವ ಉದ್ಯೋಗಿನಿ ಯೋಜನೆ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ ಇರುವ ಸ್ವಾವಲಂಬಿ ಸಾರಥಿ ಯೋಜನೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಟ್ಯಾಕ್ಸಿ, ಗೂಡ್ಸ್, ಆಟೋ ರಿಕ್ಷಾ ಯೋಜನೆಗಳು, ಡಾ. ಬಿ. ಆರ್. ಅಂಬೇಡ್ಕರ್ ನಿಗಮದ ಯೋಜನೆಗಳು, ಪ್ರಧಾನ ಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮ, ಸಮಾಜ ಕಲ್ಯಾಣ ಇಲಾಖೆಯ ಉದ್ಯಮ ಶೀಲತಾ, ಸ್ವಾವಲಂಬಿ ಸಾರಥಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ), ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರಿಕೀಕರಣ ಯೋಜನೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಹೆಸ್ಕಾಂ ಇಲಾಖೆಯ ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹೀಗೆ ಮುಂತಾದ ಯೋಜನೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಬೇಕು. ಸಕಾಲಕ್ಕೆ ಸಾಲಸೌಲಭ್ಯ ಕಲ್ಪಿಸಬೇಕೆಂದು ಸೂಚಿಸಿದರು.
ಜಿಪಂ ಯೋಜನಾ ನಿರ್ದೇಶಕ ಅಶೋಕ ಕಲಘಟಗಿ, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಬಿ. ಸಿದ್ದಯ್ಯ, ಆರ್‌ಬಿಐ ವ್ಯವಸ್ಥಾಪಕ ಸಿಲ್ ಪ್ರಿಯಾ ಗೌತಮ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net