ಪರೀಕ್ಷೆಗೆ ಸಂಬಂಧಿಸಿದ ಸಾಮಗ್ರಿಗಳನ್ನು 27 ಮಾರ್ಗಾಧಿಕಾರಿಗಳ ತಂಡಕ್ಕೆ ಹಸ್ತಾಂತರಿಸಲು ಅಪರ ಜಿಲ್ಲಾಧಿಕಾರಿಗಳು, ಉಪ ನಿರ್ದೇಶಕರು ಜಿಲ್ಲಾ ಖಜಾನೆ ಮತ್ತು ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಇವರನ್ನೊಳಗೊಂಡ ಸಮಿತಿ ನೇಮಕ ಮಾಡಲಾಗಿದೆ. ತಹಸೀಲ್ದಾರ್, ತಹಸೀಲ್ದಾರ್ ಗ್ರೇಡ್-2, ಉಪ ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು ಹಾಗೂ ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಮತ್ತು ಉಪನ್ಯಾಸಕರುಗಳನ್ನು ತ್ರಿಸದಸ್ಯ ಸಮಿತಿಯ ಸದಸ್ಯರನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿದ್ದಾರೆ. ಈ ಸಮಿತಿಗೆ ತಲಾ ಒಬ್ಬ ಸಶಸ್ತ್ರ ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್‌ಗಾಗಿ ಅವಶ್ಯಕತೆಗೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿ ಮತ್ತು ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆ ಬಂಡಲ್‌ಗಳನ್ನು ಪರೀಕ್ಷಾ ಕೇಂದ್ರದಿಂದ ಅಂಚೆ ಕಚೇರಿಗೆ ಸಾಗಿಸುವಾಗ ಪೊಲೀಸ್ ಸಿಬ್ಬಂದಿ ನೇಮಕ ಮಾಡಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.