ಭಾರತ್ ಜೋಡೋ ಕುರಿತು ಜಾಗೃತಿ, ಸಿಇಒ ರಿಷಿ ಆನಂದ ವಿನೂತನ ಪ್ರಯತ್ನ

ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯಿತಿಗೆ ಸಿಇಒ ರಿಷಿ ಆನಂದ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಶ್ರೀ ತುಂಗಳ ಹಾಗೂ ಸಿಬ್ಬಂದಿ ಇದ್ದಾರೆ.
ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯಿತಿಗೆ ಸಿಇಒ ರಿಷಿ ಆನಂದ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಶ್ರೀ ತುಂಗಳ ಹಾಗೂ ಸಿಬ್ಬಂದಿ ಇದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ತೊರವಿ ಗ್ರಾಮ ಪಂಚಾಯಿತಿಗೆ ಭೇಟಿ
  • ಅತ್ಯಾಧುನಿಕ ಗ್ರಂಥಾಲಯ ಪರಿಶೀಲನೆ
  • ಯುವ ಜನತೆಯೊಂದಿಗೆ ಸಂವಾದ

ವಿಜಯಪುರ: ‘ಯುವಕರನ್ನು ಸಂಘಟಿಸಿ, ಅವರ ಶಕ್ತಿ, ಪ್ರತಿಭೆ ಹಾಗೂ ನಾಯಕತ್ವ ಗುಣಗಳನ್ನು ಸಮಾಜದ ಅಭಿವೃದ್ಧಿಗೆ ಬಳಸಿಕೊಳ್ಳುವುದೇ ಭಾರತ್ ಜೋಡೋ ಯುವ ಸಂಘ ಯೋಜನೆಯ ಗುರಿಯಾಗಿದೆ. ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾರತ್ ಜೋಡೋ ಯುವ ಸಂಘದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು’ ಎಂದು ಜಿಪಂ ಸಿಇಒ ರಿಷಿ ಆನಂದ ಹೇಳಿದರು.

ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯಿತಿಗೆ ಶುಕ್ರವಾರ ಭೇಟಿ ನೀಡಿ ಭಾರತ ಜೋಡೋ ಯುವ ಸಂಘ ಕುರಿತು ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
ಸಂಘದ ನೋಂದಣಿ ಪ್ರಕ್ರಿಯೆ, ಯೋಜನೆಯ ಉದ್ದೇಶ, ಯುವಕರಿಗೆ ದೊರೆಯುವ ಅವಕಾಶಗಳು ಹಾಗೂ ಸಂಘದ ಮೂಲಕ ಕೈಗೊಳ್ಳಬಹುದಾದ ವಿವಿಧ ಸಮಾಜಮುಖಿ ಚಟುವಟಿಕೆಗಳ ಕುರಿತು ಯುವಕರಿಗೆ ಸಂಪೂರ್ಣ ಮಾಹಿತಿ ನೀಡಿದರು.
ಯುವಶಕ್ತಿಯನ್ನು ಸಮುದಾಯ ಅಭಿವೃದ್ಧಿಯೊಂದಿಗೆ ಜೋಡಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದ್ದು, ಸಾಮಾಜಿಕ ಸಾಮರಸ್ಯ, ಪರಿಸರ ಸಂರಕ್ಷಣೆ, ಕ್ರೀಡೆ, ಆರೋಗ್ಯ, ಕೌಶಲಾಭಿವೃದ್ಧಿ, ಸ್ವಚ್ಛತೆ, ಜಲ ಸಂರಕ್ಷಣೆ ಹಾಗೂ ಜನಜಾಗೃತಿ ಕಾರ್ಯಕ್ರಮಗಳಲ್ಲಿ ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಂತ ಅಗತ್ಯವಾಗಿದೆ ಎಂದರು.
ಯುವಕರು ಕೇವಲ ಯೋಜನೆಯ ಫಲಾನುಭವಿಗಳಾಗದೆ, ಗ್ರಾಮೀಣಾಭಿವೃದ್ಧಿ ಮತ್ತು ಸಾಮಾಜಿಕ ಪರಿವರ್ತನೆಯ ಸಕ್ರಿಯ ಪಾಲುದಾರರಾಗಬೇಕು. ವಿವಿಧ ಜಾತಿ, ಧರ್ಮ ಹಾಗೂ ಸಮುದಾಯಗಳ ಯುವಕರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮೂಲಕ ಸೌಹಾರ್ದ, ಸಹೋದರತ್ವ ಮತ್ತು ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಭಾರತ್ ಜೋಡೋ ಯುವ ಸಂಘ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದರು.
ತೊರವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರ್ಹ ಯುವಕಯುವತಿಯರು ಯೋಜನೆಯಡಿ ನೋಂದಣಿಯಾಗುವಂತೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಜಾಗೃತಿ ಮೂಡಿಸಿ, ಯುವಜನರ ಹೆಚ್ಚಿನ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಂಥಾಲಯಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಶ್ರೀ ತುಂಗಳ, ಸಿಬ್ಬಂದಿ ಹಾಗೂ ಯುವಕರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net