ರಾಜಕಾಲುವೆ ತಕ್ಷಣ ಸ್ವಚ್ಛಗೊಳಿಸಿ

ವಿಜಯಪುರ ನಗರದ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇಯರ್ ಎಂ.ಎಸ್. ಕರಡಿ ಅಧಿಕಾರಿಗಳ ಸಭೆ ನಡೆಸಿದರು. ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಇದ್ದಾರೆ.
ವಿಜಯಪುರ ನಗರದ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇಯರ್ ಎಂ.ಎಸ್. ಕರಡಿ ಅಧಿಕಾರಿಗಳ ಸಭೆ ನಡೆಸಿದರು. ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಇದ್ದಾರೆ.
Published on
ವಿಜಯವಾಣಿ ಸುದ್ದಿಜಾಲ, ವಿಜಯಪುರ
ನಗರದ ಪ್ರಮುಖ ರಾಜಕಾಲುವೆಗಳು, ಒಳಚರಂಡಿಗಳು ಹಾಗೂ ಮಳೆ ನೀರು ಹರಿವಿನ ಮಾರ್ಗಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರ ವ್ಯಾಪ್ತಿಯಲ್ಲಿ ಮುಂಗಾರು ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಪಾಲಿಕೆಯ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರು ನಿಲ್ಲುವ ಪ್ರದೇಶಗಳಲ್ಲಿ ಅಗತ್ಯ ಪಂಪ್ ಸೆಟ್ ಗಳನ್ನು ಸಿದ್ಧವಾಗಿಡಬೇಕು. ತುರ್ತು ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ಮೇಯರ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ, ವಿದ್ಯುತ್ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಸೂಚಿಸಿದರು.
ಸಾರ್ವಜನಿಕರು ಮಳೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು. ಯಾವುದೇ ತುರ್ತು ಪರಿಸ್ಥಿತಿ ಉಂಟಾದಲ್ಲಿ ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ: ೦೮೩೫೨-೨೨೨೪೭೪ಕ್ಕೆ ಸಂಪರ್ಕಿಸಲು ಮೇಯರ್ ಮನವಿ ಮಾಡಿದರು.
ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಜಲಾವೃತ ಪ್ರದೇಶಗಳು, ಮಳೆ ನೀರಿನ ಹರಿವು, ಚರಂಡಿ ಸ್ವಚ್ಛತೆ, ರಸ್ತೆ ಹಾನಿ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net