ಶಿಕ್ಷಕರ ನೇಮಕಾತಿ ಅಽಸೂಚನೆ ಗೊಂದಲ ನಿವಾರಿಸಿ

ರಾಜ್ಯದ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರ ನೇಮಕಾತಿ ಮಾಡುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಷತ್ ವತಿಯಿಂದ ವಿಜಯಪುರದಲ್ಲಿ ಜಿಲ್ಲಾಽಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಸಲ್ಲಿಸಲಾಯಿತು. ಶ್ರೀನಾಥ ಪೂಜಾರಿ, ಹುಚ್ಚಪ್ಪ ಬಾವಿಮನಿ, ವಿಜಯಲಕ್ಷಿ÷್ಮÃ ಮತ್ತಿತರರಿದ್ದಾರೆ.
ರಾಜ್ಯದ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರ ನೇಮಕಾತಿ ಮಾಡುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಷತ್ ವತಿಯಿಂದ ವಿಜಯಪುರದಲ್ಲಿ ಜಿಲ್ಲಾಽಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಸಲ್ಲಿಸಲಾಯಿತು. ಶ್ರೀನಾಥ ಪೂಜಾರಿ, ಹುಚ್ಚಪ್ಪ ಬಾವಿಮನಿ, ವಿಜಯಲಕ್ಷಿ÷್ಮÃ ಮತ್ತಿತರರಿದ್ದಾರೆ.
Published on

ವಿಜಯಪುರ:

ರಾಜ್ಯದ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರ ನೇಮಕಾತಿ ಮಾಡುವುದು ಮತ್ತು ಶಿಕ್ಷಕರ ನೇಮಕಾತಿ ಅಽಸೂಚನೆಯಲ್ಲಿ ಉಂಟಾಗಿರುವ ಗೊಂದಲಗಳನ್ನು ಕೂಡಲೇ ನಿವಾರಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಷತ್ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ, ಜಿಲ್ಲಾಽಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಸಲ್ಲಿಸಲಾಯಿತು.

ನೇತೃತ್ವ ವಹಿಸಿದ್ದ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶಾಲೆಗಳ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಇಂಗ್ಲಿಷ್ ಶಿಕ್ಷಕರ ಹುದ್ದೆಗಳನ್ನು ಸೃಷ್ಟಿಸಿ, ಖಾಲಿ ಹುದ್ದೆಗಳ ಜತೆಗೆ ಹೊಸ ಹುದ್ದೆಗಳಿಗೂ ನೇಮಕಾತಿ ಕೈಗೊಳ್ಳಬೇಕು. ಅಲ್ಲದೆ, ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 250ಕ್ಕೂ ಅಽಕ ಇಂಗ್ಲಿಷ್ ಶಿಕ್ಷಕರ ಹುದ್ದೆಗಳು ಲಭ್ಯವಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಗಣಿತ, ಸಮಾಜ ವಿಜ್ಞಾನ ಹಾಗೂ ಉರ್ದು ವಿಷಯಗಳ ಶಿಕ್ಷಕರ ನೇಮಕಾತಿ ಅಽಸೂಚನೆಯಲ್ಲಿ ಉಂಟಾಗಿರುವ ಗೊಂದಲಗಳನ್ನು ಕೂಡಲೇ ನಿವಾರಿಸಬೇಕು. ಅಲ್ಲದೆ, ಅರ್ಹ ಅಭ್ಯರ್ಥಿಗಳಿಗೆ ಯಾವುದೇ ಅನ್ಯಾಯವಾಗದಂತೆ ಅಽಸೂಚನೆಯಲ್ಲಿರುವ ಗೊಂದಲಗಳನ್ನು ಸ್ಪಷ್ಟಪಡಿಸಿ, ಅರ್ಹತಾ ಮಾನದಂಡಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಪರಿಷತ್‌ನ ನಗರ ಘಟಕದ ಅಧ್ಯಕ್ಷ ಹುಚ್ಚಪ್ಪ ಬಾವಿಮನಿ, ಕಾರ್ಯದರ್ಶಿ ಯಾಸೀನ, ಪದಾಽಕಾರಿಗಳಾದ ದಾವುದ, ಯಮನಪ್ಪ, ಮಡಿವಾಳಪ್ಪ ಬಡಿಗೇರ, ದೇವರಾಜ್, ನಾಗರಾಜ್ ಮಾಳಿಂಗರಾಯ, ಗಣೇಶ ಪಿರಪ್ಪ, ವಿಜಯಲಕ್ಷಿ÷್ಮÃ, ಯಮನಪ್ಪ ಪೂಜಾರಿ, ಶಿವರಾಜ ಯಾಳವಾರ, ದೇವು ಕೊಪ್ಪಳ, ಕಾಶಿಬಾಯಿ ಯಾಳವಾರ, ಲಕ್ಷಿ÷್ಮಬಾಯಿ ಮಜ್ಜಗಿ, ಶ್ರೀದೇವಿ ಬಾಗೇವಾಡಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net