ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಬಳಕೆ ಸಹಕಾರಿ

ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಹಮ್ಮಿಕೊಂಡಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಜಿಲ್ಲಾಽಕಾರಿ ಡಾ. ಆನಂದ ಕೆ. ಚಾಲನೆ ನೀಡಿದರು.ಬಸವಲಿಂಗ ಸ್ವಾಮೀಜಿ, ಶ್ರದ್ಧಾನಂದ ಸ್ವಾಮೀಜಿ ಮತ್ತಿತರರಿದ್ದಾರೆ.
ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಹಮ್ಮಿಕೊಂಡಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಜಿಲ್ಲಾಽಕಾರಿ ಡಾ. ಆನಂದ ಕೆ. ಚಾಲನೆ ನೀಡಿದರು.ಬಸವಲಿಂಗ ಸ್ವಾಮೀಜಿ, ಶ್ರದ್ಧಾನಂದ ಸ್ವಾಮೀಜಿ ಮತ್ತಿತರರಿದ್ದಾರೆ.
Published on
ವಿಜಯಪುರ : ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಿರಿಧಾನ್ಯಗಳ ಬಳಕೆ ಅತ್ಯಗತ್ಯವಾಗಿದೆ. ಪ್ರತಿಯೊಬ್ಬರೂ ನಿತ್ಯ ಸಿರಿಧಾನ್ಯ ಆಹಾರ ಸೇವಿಸಲು ಮುಂದಾಗಬೇಕು ಜಿಲ್ಲಾಽಕಾರಿ ಡಾ. ಆನಂದ ಕೆ. ಸಲಹೆ ನೀಡಿದರು.
ಜಿಲ್ಲಾಡಳಿತ, ಜಿ.ಪಂ. ಹಾಗೂ ಕೃಷಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಜ್ಞಾನಯೋಗಾಶ್ರಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಿರಿಧಾನ್ಯ ನಡಿಗೆ (ವಾಕ್‌ಥಾನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು.
ಸದ್ಯದ ದಿನಗಳಲ್ಲಿ ಮಧುಮೇಹ, ರಕ್ತದೊತ್ತಡದಂತಹ ರೋಗಗಳು ಸಾಮಾನ್ಯವಾಗಿವೆ. ಅಂತಹ ರೋಗಗಳಿಂದ ದೂರ ಉಳಿಯಲು ಸಿರಿಧಾನ್ಯಗಳು ಅತ್ಯಂತ ಸಹಕಾರಿಯಾಗಿವೆ. ನಮ್ಮ ಹಿರಿಯರ ಆಹಾರ ಪದ್ಧತಿಯಲ್ಲಿ ಪ್ರಮುಖ ಸ್ಥಾನ ಪಡೆದಿದ್ದ ಸಿರಿಧಾನ್ಯಗಳನ್ನು ಪುನಃ ದಿನನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದ್ದು, ಆರೋಗ್ಯಕರ ಆಹಾರ ಪದ್ಧತಿ ಹಾಗೂ ಸಿರಿಧಾನ್ಯಗಳ ಬಳಕೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಿರಿಧಾನ್ಯಗಳು ಹೆಚ್ಚು ಪೋಷಕಾಂಶಗಳನ್ನು ಹೊಂದಿದ್ದು, ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳಾಗಿವೆ. ಅಲ್ಲದೆ, ಹವಾಮಾನ ಬದಲಾವಣೆ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಸಿರಿಧಾನ್ಯಗಳು ರೈತರಿಗೆ ವರದಾನವಾಗಿವೆ ಎಂದರು.
ಕೃಷಿ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಸಿರಿಧಾನ್ಯಗಳ ಪೌಷ್ಟಿಕ ಮಹತ್ವ, ಉಪಯೋಗ ಹಾಗೂ ಸಿರಿಧಾನ್ಯಗಳ ಬಳಕೆ ಹೆಚ್ಚಿದರೆ ರೈತರ ಆದಾಯವೂ ಹೆಚ್ಚುವುದರ ಜತೆಗೆ ಜನರ ಆರೋಗ್ಯವೂ ಉತ್ತಮವಾಗುತ್ತದೆ ಎಂದು ತಿಳಿಸಿದರು.
ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳಾದ ಬಸವಲಿಂಗ ಸ್ವಾಮೀಜಿ, ಶ್ರದ್ಧಾನಂದ ಸ್ವಾಮೀಜಿ ಉಪಸ್ಥಿತಿ ವಹಿಸಿದ್ದರು. ಸಿರಿ ಧಾನ್ಯ ನಡಿಗೆಯಲ್ಲಿ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಸಂಘಸAಸ್ಥೆಗಳ ಪದಾಽಕಾರಿಗಳು, ವಿವಿಧ ಇಲಾಖೆಯ ಅಽಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಿರಿಧಾನ್ಯಗಳ ಮಹತ್ವ ಸಾರುವ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು. ನಗರ ಪ್ರಮುಖ ರಸ್ತೆಗಳಲ್ಲಿ ಸಾಗಿದ ನಡಿಗೆಯು ಸಾರ್ವಜನಿಕರ ಗಮನ ಸೆಳೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net