ಮೂರು ವರ್ಷದ ಸಿದ್ದರಾಮಯ್ಯ ಆಡಳಿತದಲ್ಲಿ ಮುನ್ನೂರು ವೈಫಲ್ಯಗಳಿದ್ದು, ಆ ವೈಫಲ್ಯದ ಹಾರ ಹಾಕಿ ಅಭಿನಂದಿಸುವುದಾಗಿ ತಿಳಿಸಿದ ಸಂಸದರು, ಭ್ರಷ್ಟಾಚಾರ, ಹಗರಣ, ಅಕ್ರಮಗಳೇ ಸಿದ್ದರಾಮಯ್ಯ ಸರ್ಕಾರದ ಸಾಧನೆ. ಕುರ್ಚಿ ಕಿತ್ತಾಟದಲ್ಲೇ ಕಾಲಹರಣ ಮಾಡಿದ್ದು ಬಿಟ್ಟರೆ ಈ ಮೂರು ವರ್ಷದ ಆಡಳಿತಾವಧಿಯಲ್ಲಿ ಅಭಿವೃದ್ಧಿ ಎಂಬುದು ಶೂನ್ಯ. ಒಂದೇ ಒಂದು ಹೇಳಿಕೊಳ್ಳುವಂಥ ಅಭಿವೃದ್ಧಿ ಕಾರ್ಯಗಳಾಗಿಲ್ಲ. ರಸ್ತೆಗಳು ಹದಗೆಟ್ಟಿವೆ, ಮೂಲ ಸೌಕರ್ಯಗಳು ಮರೀಚಿಕೆಯಾಗಿವೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಸಂಪೂರ್ಣ ಹಳ್ಳ ಹಿಡಿದಿವೆ ಎಂದು ಹರಿಹಾಯ್ದರು.