ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ

ವಿಜಯಪುರ ನಗರದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರ ಸಂಘ ಹಾಗೂ ಸಿಐಟಿಯು ಜಿಲ್ಲಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ನಾರಾಯಣ ಬಡಿಗೇರ, ಲಾಲ್ ಅಹ್ಮದ್ ಶೇಖ, ಲಕ್ಷ್ಮಣ ಹಂದ್ರಾಳ ಇತರರಿದ್ದಾರೆ.
ವಿಜಯಪುರ ನಗರದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರ ಸಂಘ ಹಾಗೂ ಸಿಐಟಿಯು ಜಿಲ್ಲಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ನಾರಾಯಣ ಬಡಿಗೇರ, ಲಾಲ್ ಅಹ್ಮದ್ ಶೇಖ, ಲಕ್ಷ್ಮಣ ಹಂದ್ರಾಳ ಇತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಉಪಕಾರ್ಯದರ್ಶಿಗೆ ಮನವಿ
  • ಪ್ರತಿಭಟನಾ ಮೆರವಣಿಗೆ
ವಿಜಯಪುರ: ನಿವೃತ್ತ ನೌಕರರಿಗೆ 6 ಲಕ್ಷ ರೂ. ಇಡುಗಂಟು, ಸೇವಾ ಹಿರಿತನದ ಆಧಾರದ ಮೇಲೆ ವೇತನ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರ ಸಂಘ ಹಾಗೂ ಸಿಐಟಿಯು ಜಿಲ್ಲಾ ಸಮಿತಿ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಡಾ. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಡಳಿತ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಬಳಿಕ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ್ ಅವರಿಗೆ ಮನವಿ ಸಲ್ಲಿಸಿದರು.
ನೇತೃತ್ವ ವಹಿಸಿದ್ದ ಜಿಲ್ಲಾ ಅಧ್ಯಕ್ಷ ನಾರಾಯಣ ಬಡಿಗೇರ ಮಾತನಾಡಿ, ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈಗಾಗಲೇ ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದೆ. ಸರ್ಕಾರ ಸಹ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಆದರೆ, ಈವರೆಗೂ ಬೇಡಿಕೆ ಈಡೇರದ ಹಿನ್ನೆಲೆ ಹೋರಾಟ ಅನಿವಾರ್ಯವಾಗಿದೆ ಎಂದರು.
ಪ್ರಧಾನ ಕಾರ್ಯದರ್ಶಿ ಲಾಲ್ ಅಹ್ಮದ್ ಶೇಖ ಮತ್ತು ಸಿಐಟಿಯು ಜಿಲ್ಲಾ ಸಂಚಾಲಕ ಲಕ್ಷ್ಮಣ ಹಂದ್ರಾಳ ಮಾತನಾಡಿ, ತಾವೇ ಒಪ್ಪಿಕೊಂಡಿರುವ ಪ್ರಕಾರ ಎಲ್ಲ ನೌಕರರಿಗೆ 5000 ರೂ. ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಬೇಕು. ಪ್ರತಿಯೊಂದು ಪಂಚಾಯಿತಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಕಳೆದ 18-20 ವರ್ಷಗಳಿಂದ ಡಾಟಾ ಎಂಟ್ರಿ ಆಪರೇಟರ್‌ಗಳಾಗಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಅನುಮೋದನೆ ನೀಡಬೇಕು. 2ನೇ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ ಆಗಬೇಕು. ಈಗಾಗಲೆ ಆರೋಗ್ಯದ ಕುರಿತು ಸಿಬ್ಬಂದಿ ಮಾಹಿತಿಗಾಗಿ ಫಾರ್ಮೆಟ್ ಕಳುಹಿಸಿದ್ದು ಅದರಲ್ಲಿ ಗುತ್ತಿಗೆ, ಹೊರಗುತ್ತಿಗೆ, ಗೌರವಧನದ ಕಾರ್ಮಿಕರ ಮಾಹಿತಿ ನೀಡಲು ತಿಳಿಸಲಾಗಿದೆ. ಆದರೆ ಈ ಫಾರ್ಮೆಟ್‌ನಲ್ಲಿ ಪಂಚಾಯತಿ ನೌಕರರೆಂದು ಮಾಹಿತಿ ಇಲ್ಲ. ಇದನ್ನು ಸರಿಪಡಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.
ಖಜಾಂಚಿ ಪಿಂಟು ಕೊಂಡಗುಳಿ, ಮುಖಂಡರಾದ ಚಂದ್ರಶೇಖರ ವಾಲಿಕಾರ, ಶಿವಾನಂದ ಬಿರಾದಾರ, ಜಮೀರ್ ನದಾಫ್, ಸಿದ್ಧಯ್ಯ ಮಠ, ಸಿದ್ಧರಾಮ ಹಳ್ಳಿ, ಚಾಂದಸಾಬ ಅಡಾಡಿ, ಅಂಬಾಜಿ ಬಾವೂರ, ಶಿವಾನಂದ ಅಣಮಿ, ಮಲ್ಲಿಕಾರ್ಜುನ ಮಾದರ, ಸಂಗಪ್ಪ ಗಂಗಶೆಟ್ಟಿ, ಭೀಮನು ಲಮಾಣಿ, ಲಕ್ಷ್ಮಣ ಪಾಟೀಲ, ಯಲ್ಲಪ್ಪ ಹೆಕ್ಕೆನವರ, ಶಂಕರ ಮಾಡಗಿ, ಹೂವಣ್ಣ ಪೂಜಾರಿ, ಬಸವರಾಜ ಜೊಲ್ಲೆ, ಬಾಪು ಟಕ್ಕಳಕಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net