ಜAಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಮುಂಬರುವ ಮುಂಗಾರು ಹಂಗಾಮಿಗೆ ಜಿಲ್ಲೆಗೆ ಏಪ್ರಿಲ್ 2026 ದಿಂದ ಸೆಪ್ಟೆಂಬರ್ 2026 ರವರೆಗೆ ಒಟ್ಟು 1.27 ಲಕ್ಷ ಮೆಟ್ರಿಕ್ ಟನ್ ವಿವಿಧ ರಸಗೊಬ್ಬರಗಳ ಬೇಡಿಕೆಯಿದೆ. 2026 ಏ. 15ರ ಸ್ಥಿತಿಗೆ ಜಿಲ್ಲೆಯಲ್ಲಿ ಒಟ್ಟು 64,337 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ಅದರಲ್ಲಿ ಮುಖ್ಯವಾಗಿ 16,442 ಮೆಟ್ರಿಕ್ ಟನ್ ಯೂರಿಯಾ, 9,871 ಮೆಟ್ರಿಕ್ ಟನ್ ಡಿಎಪಿ ಹಾಗೂ 32,466 ಮೆಟ್ರಿಕ್ ಟನ್ ಕಾಂಪ್ಲೆಕ್ಸ್ ರಸಗೊಬ್ಬರಗಳ ದಾಸ್ತಾನು ಮಾಡಿಕೊಳ್ಳಲಾಗಿದೆ. ಮಾಹೆವಾರು ಸರಬರಾಜು ಯೋಜನೆಯಂತೆ ಜಿಲ್ಲೆಗೆ ರಸಗೊಬ್ಬರ ಪೂರೈಕೆಯಾಗುತ್ತಿದ್ದು, ಸಮರ್ಪಕ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಸಗೊಬ್ಬರ ಮಾರಾಟಗಾರರಿಗೆ ಸೂಚನೆ ನೀಡಿದರು.