1ರಿಂದ ದಸರಾ ಕ್ರೀಡಾಕೂಟ ಪ್ರಾರಂಭ

ಲ್ಲೆಯಾದ್ಯಂತ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಪುರುಷ ಹಾಗೂ ಮಹಿಳೆಯರಿಗಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲೂಕು ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, -ÀÅಟ್ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗಾಸನ ಸ್ಪರ್ಧೆಗಳು ನಡೆಯಲಿವೆ.
ಲ್ಲೆಯಾದ್ಯಂತ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಪುರುಷ ಹಾಗೂ ಮಹಿಳೆಯರಿಗಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲೂಕು ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, -ÀÅಟ್ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗಾಸನ ಸ್ಪರ್ಧೆಗಳು ನಡೆಯಲಿವೆ.
Published on

ವಿಜಯಪುರ : ಜಿಲ್ಲೆಯಾದ್ಯಂತ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಪುರುಷ ಹಾಗೂ ಮಹಿಳೆಯರಿಗಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲೂಕು ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, -ÀÅಟ್ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗಾಸನ ಸ್ಪರ್ಧೆಗಳು ನಡೆಯಲಿವೆ.

ಸೆ. 1ರಂದು ತಿಕೋಟಾ ತಾಲೂಕಿನ ಸೋಮದೇವರ ಹಟ್ಟಿ ದುರ್ಗಾದೇವಿ ಶಾಲೆಯಲ್ಲಿ, 2ರಂದು ವಿಜಯಪುರ ತಾಲೂಕಿನ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ, 6ರಂದು ನಿಡಗುಂದಿ ತಾಲೂಕಿನ ಕಮದಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ, 7ರಂದು ಇಂಡಿ ತಾಲೂಕು ಕ್ರೀಡಾಂಗಣದಲ್ಲಿ, 8ರಂದು ಬಬಲೇಶ್ವರದ ಶಾಂತವೀರ ಕಾಲೇಜಿನಲ್ಲಿ ಹಾಗೂ ಚಡಚಣದ ಸಂಗಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕಿನ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.
9ರಂದು ದೇವರಹಿಪ್ಪರಗಿ ತಾಲೂಕಿನ ಕ್ರೀಡಾಕೂಟವನ್ನು ದೇವರ ಹಿಪ್ಪರಗಿಯ ಬಿಎಲ್‌ಡಿಇ ಸಂಸ್ಥೆ ಆವರಣದಲ್ಲಿ, 10ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಅಲ್ಲಿನ ಎಂಜಿವಿಸಿ ಕಾಲೇಜಿನಲ್ಲಿ, 11ರಂದು ಸಿಂದಗಿ ತಾಲೂಕಿಗೆ ಸಂಬAಽಸಿದAತೆ ತಾಲೂಕು ಕ್ರೀಡಾಂಗಣದಲ್ಲಿ, 13ರಂದು ಕೊಲ್ಹಾರ ತಾಲೂಕಿನ ಕ್ರೀಡಾಕೂಟವನ್ನು ಸ್ಥಳೀಯ ಸಂಗಮೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
14ರಂದು ಬಸವನಬಾಗೇವಾಡಿ ತಾಲೂಕಿನ ಕ್ರೀಡಾಕೂಟವನ್ನು ಬಸವನ ಬಾಗೇವಾಡಿಯ ಎಸ್‌ಬಿ ಪಿಯು ಕಾಲೇಜಿನಲ್ಲಿ, 16ರಂದು ಆಲಮೇಲ ತಾಲೂಕಿನ ಕ್ರೀಡಾಕೂಟವನ್ನು ಬಳಗಾನೂರ ಗ್ರಾಮದ ಕೇದಾರಲಿಂಗೇಶ್ವರ ಪ್ರೌಢ ಶಾಲೆಯಲ್ಲಿ ನಡೆಯಲಿದೆ ಎಂದು ಯುವ ಸಬಲೀಕರ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net