ಚುನಾವಣೆ ನಾಯಕತ್ವ ಬೆಳವಣಿಗೆಗೆ ಪೂರಕ

ವಿಜಯಪುರದ ಚೇತನಾ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರಮಾಣವಚನ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ರಾಜಶ್ರೀ ಜುಗತಿ, ಎಸ್.ಎಸ್. ಗೌರಿ, ಆರ್.ವಿ. ಹೊಸೂರ ಮತ್ತಿತರರಿದ್ದಾರೆ.
ವಿಜಯಪುರದ ಚೇತನಾ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರಮಾಣವಚನ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ರಾಜಶ್ರೀ ಜುಗತಿ, ಎಸ್.ಎಸ್. ಗೌರಿ, ಆರ್.ವಿ. ಹೊಸೂರ ಮತ್ತಿತರರಿದ್ದಾರೆ.
Published on
ವಿಜಯಪುರ: ಸಂವಿಧಾನದ ಜ್ಞಾನ ತಿಳಿಸಿಕೊಡುವುದರ ಮೂಲಕ ಪ್ರಜಾಪ್ರಭುತ್ವದ ಕಲ್ಪನೆಯ ಜತೆಗೆ ವಿದ್ಯಾರ್ಥಿಗಳಲ್ಲಿ ಗಟ್ಟಿತನದ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಶಾಲಾ ಸಂಸತ್ ಚುನಾವಣೆಗಳು ಪೂರಕವಾಗಿವೆ ಎಂದು ನಗರ ವಲಯದ ಕ್ಷೇತ್ರ ಶಿಕ್ಷಣಾಽಕಾರಿ ಆರ್.ವಿ. ಹೊಸೂರ ಹೇಳಿದರು.
ನಗರದ ಚೇತನಾ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಸಮಾರಂಭ ಹಾಗೂ ಶೈಕ್ಷಣಿಕ ವರ್ಷದ ಶಾಲಾ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಭವಿಷ್ಯತ್ತಿನಲ್ಲಿ ಉತ್ತಮ ನಾಯಕರಾಗುವಲ್ಲಿ ಶಾಲಾ ಮಟ್ಟದ ಚುನಾವಣೆಗಳು ಮಾದರಿಯಾಗುತ್ತವೆ. ಉತ್ತಮ ನಾಯಕತ್ವದ ಜತೆಗೆ ಒಳ್ಳೆಯ ಆಚಾರ-ವಿಚಾರ ಸಂಸ್ಕಾರವನ್ನು ವಿದ್ಯಾರ್ಥಿಗಳು ಹೊಂದಬೇಕು. ಅಲ್ಲದೆ, ನಾಯಕರಾದವರು ವಿನಯಶೀಲರಾಗಿರಬೇಕು. ಸಹಪಾಠಿಗಳ ಜತೆಗೆ ಸೃಜನಶೀಲತೆಯಿಂದ ಕಾರ್ಯ ನಿರ್ವಹಿಸಿದಾಗ ನಾಯಕನ ವ್ಯಕ್ತಿತ್ವಕ್ಕೆ ಮೆರಗು ಬರುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಉಪನ್ಯಾಸಕ ಸಾಹೇಬಗೌಡ ಗೌರಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಕನಸು ಹೊಂದಿರಬೇಕು. ಆ ಕನಸನ್ನು ನನಸಾಗಿಸಲು ನಿರಂತರ ಶ್ರಮಿಸಬೇಕು. ಅಲ್ಲದೆ, ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು. ಅಂದಾಗಲೇ ಕಂಡ ಕನಸು ನನಸಾಗಲು ಸಾಧ್ಯ ಎಂದು ತಿಳಿಸಿದರು.
ಸಂಸ್ಥೆ ಅಧ್ಯಕ್ಷೆ ರಾಜಶ್ರೀ ಜುಗತಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಸ್ವಯಂ ಯತ್ನ ಮತ್ತು ತಾಳ್ಮೆಯಂತಹ ಗುಣವನ್ನು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ನಾಯಕರಾಗಲು ಸಾಧ್ಯ ಎಂದರು.
ಮುಖ್ಯ ಗುರು ಎ.ಎಚ್. ಕೊಳಮಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆ ಉಪಾಧ್ಯಕ್ಷ ರೋಹಿತ ಜುಗತಿ, ನಿರ್ದೇಶಕ ನಾಗರಾಜ ಹೇರಲಗಿ, ಸಹಾಯಕ ಆಡಳಿತಾಽಕಾರಿ ಪ್ರಮೋದ ಕುಲಕರ್ಣಿ, ಪ.ಪೂ. ಕಾಲೇಜಿನ ಪ್ರಾಚಾರ್ಯ ಎಸ್.ಎಸ್. ಬ್ಯಾಕೋಡ, ಸಂಯೋಜಕ ಸಾಗರ ಕುಲಕರ್ಣಿ, ಸಿ.ಎಸ್. ವಾಲಿ, ಹೇಮಾ ಪಾಟನೆ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net