ಚಿಂತಕ ಡಾ. ಡಿ.ಜಿ. ಸಾಗರ ಮಾತನಾಡಿ, ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ಸ್ವಾಗತಾರ್ಹ. ಸಮಾಜದಲ್ಲಿ ಮಹಿಳೆಯರ ಮೇಲಿನ ತಾರತಮ್ಯ ಮತ್ತು ಅಸಮಾನತೆ ಇನ್ನೂ ಮುಂದುವರಿದಿರುವ ನಡುವೆಯೂ ಮಹಿಳೆಯರು ಚೇತರಿಸಿಕೊಂಡು ಮುಂದೆ ಸಾಗುತ್ತಿದ್ದು, ಅವರಿಗೆ ವಿಶೇಷ ಪ್ರೋತ್ಸಾಹ ನೀಡುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.