ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಭವಿಷ್ಯ ಉಜ್ವಲಗೊಳಿಸಿ

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಭವಿಷ್ಯ ಉಜ್ವಲಗೊಳಿಸಿ
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಭವಿಷ್ಯ ಉಜ್ವಲಗೊಳಿಸಿ
Published on
ವಿಜಯಪುರ : ಹೆಣ್ಣು ಮತ್ತು ಗಂಡು ತಾರತಮ್ಯ ಮಾಡದೆ ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳ ಭವಿಷ್ಯ ಉಜ್ವಲಗೊಳಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಹೇಳಿದರು.
ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಿಎಲ್‌ಡಿಇ ಸಂಸ್ಥೆ ಬಂಗಾರಮ್ಮ ಸಜ್ಜನ, ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ಸಹಯೋಗದಲ್ಲಿ ನಗರದ ಬಂಗಾರಮ್ಮ ಸಜ್ಜನ, ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ಯೋಜನೆಯಡಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ-2025ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜಕ್ಕೆ ಅತಿ ದೊಡ್ಡ ಪಿಡುಗಾದ ಪ್ರಸವಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಹಾಗೂ ಬಾಲ್ಯ ವಿವಾಹ ಪದ್ಧತಿಯಂತಹ ಅನಿಷ್ಟ ಪದ್ಧತಿ ತಡೆಗಟ್ಟಬೇಕು. ಇಂದು ಮಹಿಳೆ ಎಲ್ಲ ಕ್ಷೇತ್ರಗಳಲ್ಲೂ ಮುಂದಿದ್ದು, ತಮ್ಮದೇಯಾದ ಕೊಡುಗೆ ನೀಡುತ್ತಿದ್ದಾರೆ. ಸಾರ್ವಜನಿಕರು ಕೂಡ ತಮ್ಮ ಸಮಾಜಮುಖಿ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿದಲ್ಲಿ ಎಲ್ಲರೂ ಒಗ್ಗೂಡಿ ಲಿಂಗ ತಾರತಮ್ಯ ಹೊಡೆದೋಡಿಸಬಹುದು ಎಂದರು.
ಮಹಿಳಾ ಪೋಲಿಸ್ ಠಾಣೆ ಸಬ್ ಇನ್‌ಸ್ಟೆಕ್ಟರ್ ಆರ್.ಎ. ದಿನ್ನಿ ವಿಶೇಷ ಉಪನ್ಯಾಸ ನೀಡಿ, ಆಧುನಿಕ ಜಗತ್ತಿನಲ್ಲಿ
ಸಾಮಾಜಿಕ ಜಾಲತಾಣದ ಬಳಕೆ ಹೆಚ್ಚಾಗಿದೆ. ಜಾಲತಾಣಗಳಲ್ಲಿ ಅಪರಿಚಿತ ವ್ಯಕ್ತಿಗಳು ನೀಡುವ ಆಸೆ, ಆಮಿಷಕ್ಕೊಳಗಾಗಿ ತಮ್ಮ ಭವಿಷ್ಯಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಗುರು-ಹಿರಿಯರ ಮಾರ್ಗದರ್ಶನದಲ್ಲಿ ತಮ್ಮ ಜೀವನ ರೂಪಿಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ತಾಳಿಕೋಟೆಯ ವಿವಿಎಸ್ ಮಹಿಳಾ ಪಪೂ ಕಾಲೇಜಿನ ಪ್ರಾಚಾರ್ಯೆ ಜ್ಯೋತಿ ಹಿರೇಮಠ ಮಾತನಾಡಿ, ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಗುರಿ, ಉದ್ದೇಶ ಮತ್ತು ಹಿನ್ನೆಲೆ ಕುರಿತು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ. ಚವಾಣ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಿಷನ್ ಶಕ್ತಿ ಸಂಯೋಜಕಿ ಭಾರತಿ ಪಾಟೀಲ ಬಾಲ್ಯ ವಿವಾಹ ನಿಷೇಧ ಮತ್ತು ದತ್ತು ಮಕ್ಕಳ ಮಾಸಾಚರಣೆ ಕುರಿತು ಹಾಗೂ ಮೇಲ್ವಿಚಾರಕಿ ಶಿಲ್ಪಾ ನಾಯಕ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಬಗ್ಗೆ ಪ್ರತಿಜÁ್ಞ ವಿಽ ಬೋಽಸಿದರು. ಅಲ್ಲದೆ, ಬೇಟಿ ಬಚಾವೋ ಬೇಟಿ ಪಡಾವೋ ಲೋಗೋ, ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು.
ಪ್ರಾಚಾರ್ಯ ಡಾ. ವೈ. ತಮ್ಮಣ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಽಕಾರಿ ದೀಪಾಕ್ಷಿ ಜಾನಕಿ, ಶಿಶು ಅಭಿವೃದ್ಧಿ ಯೋಜನಾಽಕಾರಿಗಳಾದ ಎಸ್. ಮ್ಯಾಗೇರಿ, ಬಸವರಾಜ ಜಿಗಳೂರು ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net