ನಂದಿ ಧ್ವಜಗಳ ಭವ್ಯ ಮೆರವಣಿಗೆ

ವಿಜಯಪುರದ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಂದಿಧ್ವಜಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪೂಜೆ ನೆರವೇರಿಸಿದರು. ಎಂ.ಎಸ್. ಕರಡಿ, ಎಸ್.ಸಿ. ಉಪ್ಪಿನ ಮತ್ತು ಭಕ್ತಾಧಿಗಳಿದ್ದಾರೆ.
ವಿಜಯಪುರದ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಂದಿಧ್ವಜಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪೂಜೆ ನೆರವೇರಿಸಿದರು. ಎಂ.ಎಸ್. ಕರಡಿ, ಎಸ್.ಸಿ. ಉಪ್ಪಿನ ಮತ್ತು ಭಕ್ತಾಧಿಗಳಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಶ್ರೀ ಸಿದ್ಧೇಶ್ವರ
  • ಜಾತ್ರಾ ಮಹೋತ್ಸವ
ವಿಜಯಪುರ: ನಗರದ ಆರಾಧ್ಯ ದೈವ ಸಿದ್ಧೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಇಲ್ಲಿನ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಗಳೊಂದಿಗೆ ನಂದಿ ಧ್ವಜಗಳ ಭವ್ಯ ಮೆರವಣಿಗೆ ನಡೆಯಿತು.
ಸಿದ್ಧೇಶ್ವರ ದೇವಸ್ಥಾನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆ ಅಧ್ಯಕ್ಷ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಜಾತ್ರಾ ಸಮಿತಿ ಸದಸ್ಯರು ಬಾನೆತ್ತರದ ನಂದಿ ಧ್ವಜಗಳಿಗೆ ವಿಶೇಷ ಪೂಜೆ ನೆರವೇರಿಸಿ ನಂದಿ ಧ್ವಜಗಳ ಉತ್ಸವಕ್ಕೆ ಚಾಲನೆ ನೀಡಿದರು.
ಸಿದ್ಧೇಶ್ವರ ದೇವಸ್ಥಾನದಿಂದ ಆರಂಭಗೊಂಡ ನಂದಿ ಧ್ವಜಗಳ ಉತ್ಸವ ಗಣಪತಿ ವೃತ್ತ, ಗಾಂಧಿ ಚೌಕ್, ಕಿರಾಣಿ ಬಜಾರ, ಸರಾಫ್ ಬಜಾರ ಸಾಗಿ 770 ಲಿಂಗದ ಗುಡಿ ತಲುಪಿತು. ಅಲ್ಲಿಂದ ಮರಳಿ ನೀಲಕಂಠೇಶ್ವರ ದೇವಸ್ಥಾನಕ್ಕೆ ಆಗಮಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಂದಿ ಧ್ವಜಗಳು ಸಿದ್ಧೇಶ್ವರ ದೇವಸ್ಥಾನಕ್ಕೆ ಆಗಮಿಸಿದವು. ಸಂಜೆ ದೇವಸ್ಥಾನದ ಮುಂಭಾಗದಲ್ಲಿ ಮಂಗಳ ವಾದ್ಯ ಮತ್ತು ರಾತ್ರಿ ಭಜನಾ ಕಾರ್ಯಕ್ರಮಗಳು ನಡೆದವು.
ಮೇಯರ್ ಎಂ.ಎಸ್. ಕರಡಿ, ಸಂಸ್ಥೆ ಉಪಾಧ್ಯಕ್ಷ ಸಂಗು ಸಜ್ಜನ, ಚೇರ್ಮನ್ ಬಸಯ್ಯ ಹಿರೇಮಠ, ಪದಾಧಿಕಾರಿಗಳಾದ ಸದಾನಂದ ದೇಸಾಯಿ, ಬಿ.ಎಸ್. ಸುಗೂರ, ಎಂ.ಎಂ. ಸಜ್ಜನ, ಶಿವಾನಂದ ನೀಲಾ, ರಮೇಶ ಹಳ್ಳದ, ಜಾತ್ರಾ ಸಮಿತಿಯ ಗುರು ಗಚ್ಚಿನಮಠ, ಪ್ರೇಮಾನಂದ ಬಿರಾದಾರ, ಎಸ್.ಎಂ. ಪಾಟೀಲ, ಸುರೇಶ ಇಟ್ಟಗಿ, ಅಮೃತ ತೋಶ್ನಿವಾಲ್, ಪಾಂಡು ಸಾಹುಕಾರ ದೊಡಮನಿ, ರಾಹುಲ್ ಜಾಧವ, ಶಿವರುದ್ರ ಬಾಗಲಕೋಟೆ, ಕಿರಣ ಪಾಟೀಲ, ಪ್ರೇಮಾನಂದ ಬಿರಾದಾರ, ಎಸ್.ಸಿ. ಉಪ್ಪಿನ, ಎಸ್.ಎಚ್. ನಾಡಗೌಡ, ನಾಗಪ್ಪ ಗುಗ್ಗರಿ, ಬಸವರಾಜ ಗಣಿ, ಸುಧೀರ ಚಿಂಚಲಿ, ರಮೇಶ ಹಳ್ಳದ, ಶಿವಾನಂದ ನೀಲಾ, ಸಂತೋಷ ತಳಕೇರಿ, ವಿಠಲ ಹೊಸಪೇಠ, ಮಾದೇವ ಜಂಗಮಶೆಟ್ಟಿ, ಮುತ್ತಪ್ಪ ಹಳ್ಳಿ, ಬಸವರಾಜ ಕಂದಗಲ್ಲ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net