ಜಲಾಶಯದಲ್ಲಿ ಈಗ 89.140 ಟಿಎಂಸಿ ನೀರು ಸಂಗ್ರಹವಾಗಿದ್ದು, ಇದರಲ್ಲಿ ಬಳಸಬಹುದಾದ ನೀರಿನ ಪ್ರಮಾಣ 71.520 ಟಿಎಂಸಿ ಅಡಿ ನೀರಿದೆ. ಮುಂಗಾರು ಇನ್ನೂ ಮುಗಿದಿಲ್ಲ. ಹೀಗಾಗಿ ಜಲಾಶಯ ಭರ್ತಿಯಾಗುವ ವಿಶ್ವಾಸ ಇದೆ. ಅವಳಿ ಜಿಲ್ಲೆಯ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ನೀರಾವರಿ ಸಲಹಾ ಸಮಿತಿ ಸಭೆ ಕರೆದು ಚರ್ಚೆ ಮಾಡಿದ ನಂತರ ನೀರು ಹರಿಸುವ ನಿರ್ಧಾರ ಕೈಗೊಳ್ಳುವತನಕ ಕಾದು ಕುಳಿತುಕೊಳ್ಳುವ ಸಮಯ ಇದಲ್ಲ. ಪರಿಸ್ಥಿತಿಯ ಗಂಭೀರತೆ ಹಿನ್ನೆಲೆಯಲ್ಲಿ ತಕ್ಷಣ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.