ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಮಾತನಾಡಿ, ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಅವಕಾಶ ಕಲ್ಪಿಸುವುದು, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವುದು ಹಾಗೂ ದೀರ್ಘಕಾಲಿಕ ಉಪಯೋಗ ನೀಡುವ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದು ಯೋಜನೆಯ ಪ್ರಮುಖ ಆಶಯವಾಗಿದೆ. ಜಲ ಸಂರಕ್ಷಣೆ ಮತ್ತು ನೀರಿನ ಭದ್ರತೆ, ಕೃಷಿಗೆ ಪೂರಕವಾದ ಕಾಮಗಾರಿಗಳು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಹಾಗೂ ಜೀವನೋಪಾಯ ಅಭಿವೃದ್ಧಿಗೆ ಸಹಕಾರಿಯಾಗುವ ಕಾಮಗಾರಿಗಳಿಗೆ ಆದ್ಯತೆ ನೀಡುವ ಕುರಿತು ತಿಳಿಸಿದರು.