ವಿಜಯಪುರದ ಪುಲಕೇಶಿ ನಗರದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರ ವಿದ್ಯಾ ವರ್ಧಕ ಸಂಘದ ನೂತನ ಶಾಲಾ ಕಟ್ಟಡವನ್ನು ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು. ಎಲ್.ಬಿ. ಪಾಟೀಲ, ಸಂತೋಷ್ ರೆಡ್ಡಿ ಪಾಟೀಲ ಮತ್ತಿತರರಿದ್ದಾರೆ.
Published on:
Copied
Follow Us
ವಿಜಯಪುರ: ಇಲ್ಲಿನ ಪುಲಕೇಶಿ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ವಿದ್ಯಾವರ್ಧಕ ಸಂಘದ ನೂತನ ಶಾಲಾ ಕಟ್ಟಡದ ಉದ್ಘಾಟನೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ನೆರವೇರಿಸಿದರು.
ಸಚಿವ ಶಿವಾನಂದ ಪಾಟೀಲ ಕಾರ್ಯಾಲಯದ ಉದ್ಘಾಟನೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರ್ಯಕ್ರಮದ ಉದ್ಘಾಟನೆ ಮತ್ತು ಕೆಎಸ್‌ಡಿ ನಿಗಮದ ಅಧ್ಯಕ್ಷ ಅಪ್ಪಾಜಿ ನಾಡಗೌಡ ಸಿಟಿಡಿ ಪ್ರೊಜೆಕ್ಟರ್ ಉದ್ಘಾಟನೆ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಲಿಂಗಸುಗೂರು ಶ್ರೀಶೈಲ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶರಣಪ್ಪ ಮೇಟಿ, ವಿ.ಪ. ಮಾಜಿ ಸದಸ್ಯ ಎನ್.ಬಿ. ಬನ್ನೂರ, ಸಂಸ್ಥೆ ಅಧ್ಯಕ್ಷ ಎಲ್.ಬಿ. ಪಾಟೀಲ, ಚೇರ್ಮನ್ ಎಸ್.ಎಲ್. ಪಾಟೀಲ, ಕಾರ್ಯದರ್ಶಿ ಸಂತೋಷ ರೆಡ್ಡಿ ಪಾಟೀಲ ಉಪಸ್ಥಿತಿ ವಹಿಸಿದ್ದರು.
ನಂತರ ಕಿರುತೆರೆ ನಟಿ ಮೌನಾ ಗುಡ್ಡೆಮನೆ ಅವರಿಂದ ಮನೋರಂಜನೆ ಕಾರ್ಯಕ್ರಮಗಳು ನಡೆದವು.
ಶ್ರೀ ಜಗಜ್ಯೋತಿ ಬಸವೇಶ್ವರ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಸ್ನೇಹ ಸಮ್ಮೇಳನ ಶನಿವಾರ ಅತ್ಯಂತ ಸಂಭ್ರಮದಿAದ ನಡೆಯಿತು.
ಪಾಲಿಕೆ ಮೇಯರ್ ಎಂ.ಎಸ್. ಕರಡಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ. ಸಿ.ಕೆ. ಹೊಸಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಶಾಖಾಧಿಕಾರಿ ಪ್ರಕಾಶ ಗೊಂಗಡಿ, ಕಾಂಗ್ರೆಸ್ ಮುಖಂಡ ಸಂಗನಗೌಡ ಹರನಾಳ, ಉಪನ್ಯಾಸಕ ಜಗದೀಶ ಗುಲಗಂಜಿ ಉಪಸ್ಥಿತಿ ವಹಿಸಿದ್ದರು. ಸಂಸ್ಥೆ ಅಧ್ಯಕ್ಷ ಎಲ್.ಬಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಚೇರ್ಮನ್ ಎಸ್.ಎಲ್. ಪಾಟೀಲ, ಕಾರ್ಯದರ್ಶಿ ಸಂತೋಷ ರೆಡ್ಡಿ ಪಾಟೀಲ ಮತ್ತಿತರರಿದ್ದರು. ನಂತರ ಚಲನಚಿತ್ರ ತಾರೆ ಮೋಕ್ಷಾ ಕುಶಾಲ ಅವರಿಂದ ಮನರಂಜನೆ ಕಾರ್ಯಕ್ರಮಗಳು ಜರುಗಿದವು.