ವಿಜಯಪುರ ನಗರದ ವ್ಯಾಪಾರಿಯೊಬ್ಬರಿಗೆ ದಿ ಓಕ್ಟಾ ಟ್ರೇಡಿಂಗ್ ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿ ಲಾಭಾಂಶ ಕೊಡುವುದಾಗಿ ನಂಬಿಸಿ 2,04,71,500 ರೂ. ಹಣ ಹಾಕಿಸಿಕೊಂಡಿದ್ದರು. ನಂತರ ಲಾಭಾಂಶವನ್ನೂ ಕೊಡದೇ ವಂಚನೆ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳ ಅಕೌಂಟ್ ಫ್ರೀಜ್ ಮಾಡಿದ್ದರು. ಈ ಹಿಂದೆ ಇದೇ ಪ್ರಕರಣದಲ್ಲಿ 70 ಲಕ್ಷ ರೂ.ಗಳನ್ನು ದೂರುದಾರರ ಖಾತೆಗೆ ಜಮಾ ಮಾಡಿಸಲಾಗಿತ್ತು. ಇದೀಗ ಮತ್ತೆ 65.64 ಲಕ್ಷ ರೂ.ಗಳನ್ನು ದೂರುದಾರರಿಗೆ ಜಮಾ ಮಾಡಲಾಗಿದ್ದು, ಈ ಪ್ರಕರಣದಲ್ಲಿ ನೊಂದ ದೂರುದಾರರಿಗೆ 1,35,6400 ರೂ. ಜಮಾವಣೆ ಮಾಡಲಾಗಿದೆ ಎಂದು ಎಸ್‌ಪಿ ನಿಂಬರಗಿ ವಿವರಿಸಿದರು.