ಗುರುವಾರ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಅವರು, ವಿಜಯಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಫ್ಯಾನ್‌ಗಳ ವ್ಯವಸ್ಥೆ ಇಲ್ಲದಿರುವುದು, ನಿರಂತರ ವಿದ್ಯುತ್ ಪೂರೈಕೆಯ ಕೊರತೆ ಇರುವುದು ಕಂಡು ಬಂದಿದೆ. ಬೇಸಿಗೆಯ ತೀವ್ರ ಬಿಸಿಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಪರೀಕ್ಷಾ ಕೊಠಡಿಗಳಲ್ಲಿ ಫ್ಯಾನ್ ಇದ್ದರೆ ವಿದ್ಯುತ್ ಇಲ್ಲ, ವಿದ್ಯುತ್ ಇದ್ದರೆ ಫ್ಯಾನ್ ಇಲ್ಲ. ಕೆಲವೊಂದು ಕೊಠಡಿಗಳಲ್ಲಿ ವಿದ್ಯುತ್ ಹಾಗೂ ಫ್ಯಾನ್ ಪಾಯಿಂಟ್‌ಗಳೇ ಇಲ್ಲ ಎಂದರು.