ಶಾಲೆ ಗುಣಮಟ್ಟ ಕಾಪಾಡಿಕೊಳ್ಳಲಿ

ತಾಳಿಕೋಟೆ ನಗರದ ಶ್ರೀ ಎಸ್.ಎಸ್. ವಿದ್ಯಾಸಂಸ್ಥೆಯಡಿಯ ಶ್ರೀ ಸಂಗಮೇಶ್ವರ ಪ್ರೌಢ ಶಾಲೆ ಹಾಗೂ ಶ್ರೀ ಬ್ರಹ್ಮಲಿಂಗೇಶ್ವರ ಪ್ರಾಥಮಿಕ ಶಾಲೆಗೆ ಅಕ್ಷರ ದಾಸೋಹ ಯೋಜನೆ ಶಿಕ್ಷಣಾಽಕಾರಿ ಶಿವಚಂದ್ರ ಕತ್ನಳ್ಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಜೆ.ಎಂ. ಕೊಣ್ಣೂರ, ಬಿ.ಐ. ಹಿರೇಹೊಳಿ, ಎಸ್.ಸಿ. ಗುಡಗುಂಟಿ, ಎಂ.ಎಸ್. ರಾಯಗೊಂಡ, ಯು.ಎಚ್. ಗಟನೂರ ಇತರರಿದ್ದರು.

Published on
ತಾಳಿಕೋಟೆ: ನಗರದ ಶ್ರೀ ಎಸ್.ಎಸ್. ವಿದ್ಯಾಸಂಸ್ಥೆಯಡಿಯ ಶ್ರೀ ಸಂಗಮೇಶ್ವರ ಪ್ರೌಢ ಶಾಲೆ ಹಾಗೂ ಶ್ರೀ ಬ್ರಹ್ಮಲಿಂಗೇಶ್ವರ ಪ್ರಾಥಮಿಕ ಶಾಲೆಗೆ ವಿಜಯಪುರ ಜಿಲ್ಲಾ ಪಂಚಾಯಿತಿ ಅಕ್ಷರ ದಾಸೋಹ ಯೋಜನೆ ಶಿಕ್ಷಣಾಽಕಾರಿ ಶಿವಚಂದ್ರ ಕತ್ನಳ್ಳಿ ಭೇಟಿ ನೀಡಿ, ಶಾಲೆಯಲ್ಲಿನ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಪರಿಶೀಲಿಸಿದರು.
ನಂತರ ಶಾಲೆಯ ಅಡುಗೆ ಕೋಣೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ರುಚಿಕರ, ಗುಣಮಟ್ಟದ ಬಿಸಿಯೂಟ ಒದಗಿಸುವುದು ಅತ್ಯಂತ ಮುಖ್ಯವಾಗಿದೆ. ಅಡುಗೆ ತಯಾರಿಸುವ ಸಂದರ್ಭದಲ್ಲಿ ನೆಪ್ರಾನ್ ಕಡ್ಡಾಯವಾಗಿ ಧರಿಸಬೇಕು ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಾಲಾ ಮಕ್ಕಳಿಗೆ ಸುರಕ್ಷಿತ ಮತ್ತು ಪೌಷ್ಟಿಕ ಆಹಾರ ದೊರೆಯುವಂತೆ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ಅಡುಗೆ ಸಹಾಯಕರಿಗೆ ಸೂಚನೆ ನೀಡಿದರು.
ಪ್ರೌಢಶಾಲೆಯ ಕಾರ್ಯಾಲಯಕ್ಕೆ ಭೇಟಿ ನೀಡಿದ ಶಿವಚಂದ್ರ ಅವರು, ಶಾಲಾ ಸಿಬ್ಬಂದಿ ಕಾರ್ಯವೈಖರಿ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಜೆ.ಎಂ. ಕೊಣ್ಣೂರ, ಶಿಕ್ಷಕರಾದ ಬಿ.ಐ. ಹಿರೇಹೊಳಿ, ಎಸ್.ಸಿ. ಗುಡಗುಂಟಿ, ದೈಹಿಕ ಶಿಕ್ಷಣ ಶಿಕ್ಷಕ ಎಂ.ಎಸ್. ರಾಯಗೊಂಡ, ಚಿತ್ರಕಲಾ ಶಿಕ್ಷಕ ಯು.ಎಚ್. ಗಟನೂರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net