ಸಂವಿಧಾನದ ಆಶಯ ಈಡೇರಲಿ

ಸಿಂದಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರವರ ೧೩೫ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಿದರು. ಡಾ. ಕರಿಗೋಳೇಶ್ವರ ಪರತಾಬಾದ, ತಹಸೀಲ್ದಾರ್ ಕರೆಪ್ಪ ಬೆಳ್ಳಿ, ಪೌರಾಯುಕ್ತ ಎಸ್. ರಾಜಶೇಖರ, ರಾಮು ಅಗ್ನಿ, ಭವಾನಿ ಪಾಟೀಲ ಇತರರಿದ್ದರು.

Published on
ಸಿಂದಗಿ: ವಿಶ್ವಕ್ಕೆ ಸಮಾನತೆಯ ಹಕ್ಕು ಮತ್ತು ಶೈಕ್ಷಣಿಕ ಶಕ್ತಿಯನ್ನು ಪರಿಚಯಿಸಿದ ಮಹಾನ್ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳು ಈಡೇರಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರವರ ೧೩೫ನೇ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದ ಕ್ರಾಂತಿಗೆ ಮುನ್ನುಡಿ ಬರೆದ ಬಾಬಾ ಸಾಹೇಬರ ಬದುಕು ಮತ್ತು ಬರಹಗಳನ್ನು ನಾವು ಅನುಸರಿಸಬೇಕು ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಕರಿಗೋಳೇಶ್ವರ ಪರತಾಬಾದ ಉಪನ್ಯಾಸ ನೀಡಿ, ಅಂಬೇಡ್ಕರ್ ಭಾರತದ ಶಕ್ತಿ. ಅವರು ನೀಡಿದ ಸಂವಿಧಾನ ನಮ್ಮೆಲ್ಲರ ಹಕ್ಕು ಮತ್ತು ಜೀವನದ ಅಡಿಪಾಯವಾಗಿದೆ ಎಂದರು.
ವಿವಿಧ ಕ್ಷೇತ್ರಗಳ ಸಾಧಕರನ್ನು ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಗೌರವಿಸಲಾಯಿತು.
ತಹಸೀಲ್ದಾರ್ ಕರೆಪ್ಪ ಬೆಳ್ಳಿ, ನಗರಸಭೆ ಪೌರಾಯುಕ್ತ ಎಸ್.ರಾಜಶೇಖರ, ತಾಪಂ ಇಓ ರಾಮು ಅಗ್ನಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ, ಪುರಸಭೆ ಮಾಜಿ ಅಧ್ಯಕ್ಷ ಶಾಂತವೀರ ಬಿರಾದಾರ, ಮಾಜಿ ಸದಸ್ಯ ರಾಜಶೇಖರ ಕೂಚಬಾಳ, ಎಡಿಎಲ್‌ಆರ್ ಶಾಂತಕುಮಾರ ಅಗಸಬಾಳ, ಹೆಸ್ಕಾಂ ಎಇಇ ಚಂದ್ರಕಾಂತ ನಾಯಕ, ಉಪನೋಂದಣಾಧಿಕಾರಿ ಕಿರಣ ಹಂಪಿಹೋಳಿ, ಪಶುವೈದ್ಯಾಽಕಾರಿ ಶಿವಶರಣಪ್ಪ ಯಲಗೋಡ ಇತರರಿದ್ದರು.
ಸಿಂದಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರವರ ೧೩೫ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಿದರು. ಡಾ. ಕರಿಗೋಳೇಶ್ವರ ಪರತಾಬಾದ, ತಹಸೀಲ್ದಾರ್ ಕರೆಪ್ಪ ಬೆಳ್ಳಿ, ಪೌರಾಯುಕ್ತ ಎಸ್. ರಾಜಶೇಖರ, ರಾಮು ಅಗ್ನಿ, ಭವಾನಿ ಪಾಟೀಲ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net