ಬರ ಪರಿಶೀಲಿಸಿದ ಸಚಿವ ಎಂ.ಬಿ. ಪಾಟೀಲ, ರೈತರ ಸಂಕಷ್ಟಕ್ಕೆ ಸ್ಪಂದನೆ, ಶೀಘ್ರ ಪರಿಹಾರ ಕ್ರಮದ ಭರವಸೆ

ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿಯ ರೈತರ ಜಮೀನಿನಲ್ಲಿ ಸಚಿವ ಎಂ.ಬಿ. ಪಾಟೀಲರು ಬೆಳೆ ಹಾನಿ ಪರಿಶೀಲಿಸಿದರು. ಜಿಲ್ಲಾಧಿಕಾಡಿ ಡಾ.ಆನಂದ ಕೆ, ಸಿಇಒ ರಿಷಿ ಆನಂದ ಮತ್ತಿತರರಿದ್ದಾರೆ.
ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿಯ ರೈತರ ಜಮೀನಿನಲ್ಲಿ ಸಚಿವ ಎಂ.ಬಿ. ಪಾಟೀಲರು ಬೆಳೆ ಹಾನಿ ಪರಿಶೀಲಿಸಿದರು. ಜಿಲ್ಲಾಧಿಕಾಡಿ ಡಾ.ಆನಂದ ಕೆ, ಸಿಇಒ ರಿಷಿ ಆನಂದ ಮತ್ತಿತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲನೆ
  • ಸಚಿವ ಡಾ. ಎಂ.ಬಿ. ಪಾಟೀಲರಿಂದ ವೀಕ್ಷಣೆ
  • ಜಿಲ್ಲಾಧಿಕಾರಿ, ಸಿಇಒ ಮತ್ತಿತರರಿಂದ ಸಾಥ್

ವಿಜಯಪುರ: ಸಕಾಲಕ್ಕೆ ಮಳೆಯಾಗದ ಹಿನ್ನೆಲೆ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಚಿವ ಎಂ.ಬಿ. ಪಾಟೀಲ ಭಾನುವಾರ ಪರಿಶೀಲಿಸಿದರು.

ತಾಲೂಕಿನ ಹಿಟ್ಟಿನಹಳ್ಳಿಯಲ್ಲಿ ರೈತರ ಜಮೀನಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರೈತ ಸಂಕಷ್ಟ ಆಲಿಸಿ ಕೂಡಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮಳೆ ಅಭಾವದಿಂದಾಗಿ ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಬಿತ್ತನೆ ಮಾಡಿದ ಪೈರು ಒಣಗುತ್ತಿರುವುದನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದ ಸಚಿವರು, ಸ್ಥಳದಲ್ಲಿದ್ದ ರೈತರು ಹಾಗೂ ಕೃಷಿ ಅಧಿಕಾರಿಗಳಿಂದ ಬೆಳೆ ಹಾನಿ ಸಮಗ್ರ ಮಾಹಿತಿ ಪಡೆದುಕೊಂಡರು. ರೈತರ ಅಹವಾಲುಗಳನ್ನು ಅತ್ಯಂತ ತಾಳ್ಮೆಯಿಂದ ಆಲಿಸಿದರು.
ಜಿಲ್ಲೆಯಾದ್ಯಂತ ಭೇಟಿ ನೀಡಿ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಲಾಗುತ್ತಿದೆ. ಸುದೀರ್ಘ ವೀಕ್ಷಣೆ ನಡೆಸಿ ಪೂರ್ಣಪ್ರಮಾಣದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿ ಸಲ್ಲಿಕೆಯಾದ ತಕ್ಷಣ ಸರ್ಕಾರವು ಸೂಕ್ತ ನಿರ್ಧಾರ ಕೈಗೊಂಡು ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ. ರೈತರ ಪ್ರತಿಯೊಂದು ಸಂಕಷ್ಟಕ್ಕೂ ಸರ್ಕಾರವು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ, ಅವರ ಹಿತರಕ್ಷಣೆಗೆ ಸದಾ ಬದ್ಧವಾಗಿರುತ್ತದೆ ಎಂದರು.
ನಂತರ ಮದಭಾವಿ ಗ್ರಾಮಕ್ಕೆ ತೆರಳಿ ತೊಗರಿ ಹಾಗೂ ಹತ್ತಿ ಬೆಳೆಗಳ ವೀಕ್ಷಿಸಿದರು.
ನಾಗಠಾಣ ಶಾಸಕ ವಿಠಲ ಕಟಕದೊಂಡ, ಜಿಲ್ಲಾಧಿಕಾರಿ ಡಾ. ಆನಂದ ಕೆ, ಜಿಪಂ ಸಿಇಒ ರಿಷಿ ಆನಂದ, ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸಿದ್ದರಾಮ ಬರಗಿಮಠ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net