ಒಟ್ಟು 3.25 ಕೋಟಿ ರೂಪಾಯಿ ವೆಚ್ಚದಲ್ಲಿ, 7,000 ಚದರ ಅಡಿ ವಿಸ್ತೀರ್ಣದಲ್ಲಿ ಅತ್ಯಾಧುನಿಕವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕಟ್ಟಡ ನಿರ್ಮಿಸಲಾಗಿದೆ. ಇದರೊಂದಿಗೆ 800 ಚದರ ಅಡಿಯ ಹಳೆಯ ಕಟ್ಟಡದ ಪುನರುಜ್ಜೀವನ ಕಾರ್ಯವನ್ನು ಸಹ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಶಾಲೆಯಲ್ಲಿ 1 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಏಳು ಸುಸಜ್ಜಿತ ಕೊಠಡಿಗಳನ್ನು ಸಿದ್ಧಪಡಿಸಲಾಗಿದ್ದು, ಮಕ್ಕಳಲ್ಲಿ ನಾವೀನ್ಯತೆ ಮತ್ತು ಚಟುವಟಿಕೆ ಆಧಾರಿತ ಕಲಿಕೆಯನ್ನು ಪ್ರೋತ್ಸಾಹಿಸಲು ಸ್ಟೇಮ್‌ಲ್ಯಾಬ್ ಹಾಗೂ ನಲಿ-ಕಲಿ ಕೊಠಡಿಗಳನ್ನು ವಿಶೇಷವಾಗಿ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳ ಸುಲಭ ಕಲಿಕೆಗೆ ಪೂರಕವಾಗಿ 135 ಹೊಸ ಪೀಠೋಪಕರಣಗಳು, ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ 10 ಸುಸಜ್ಜಿತ ಶೌಚಗೃಹ ಸೇರಿ ಆಧುನಿಕ ಸೌಲಭ್ಯವುಳ್ಳ ಅಡುಗೆ ಕೊಠಡಿ ಹಾಗೂ ವಿಶಾಲವಾದ ಊಟದ ಸಭಾಂಗಣವನ್ನು ಇಲ್ಲಿ ನಿರ್ಮಿಸಲಾಗಿದೆ ಎಂದರು.