ಶಿಕ್ಷಣ ಇಲಾಖೆಗೆ 2500 ಮೇಜುಗಳ ವಿತರಣೆ ಸೇರಿ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ವಿದ್ಯುತ್ ವ್ಯವಸ್ಥೆ ಅಳವಡಿಕೆ, ಪ್ರವಾಸೋದ್ಯಮ ಇಲಾಖೆ ಎಸ್‌ಸಿಪಿಟಿ, ಎಸ್‌ಪಿ ಯೋಜನೆಯಡಿ ಆರು ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟೀನ್ ವಿತರಿಸಲಾಗುತ್ತಿದೆ. ಇದರ ಸದ್ಭಳಕೆಯಾಗಬೇಕು. ಜಿಲ್ಲೆಯ ಅಭಿವೃದ್ಧಿಗಾಗಿ ವಿವಿಧ ಸಂಸ್ಥೆಗಳು ನಮ್ಮೊಂದಿಗೆ ಸದಾ ಕೈಜೋಡಿಸುತ್ತಿವೆ. ಅದರಲ್ಲಿ ಪವರ್ ಗ್ರೀಡ್ ಸಂಸ್ಥೆಯೂ ಒಂದು. ಇತ್ತೀಚೆಗಷ್ಟೆ ಜಿಂದಾಲ್ ಸಂಸ್ಥೆಯೊಂದಿಗೆ ಸಮಾಲೋಚಿಸಿದ್ದು, ಜಿಲ್ಲೆಯಲ್ಲಿ 100 ವರ್ಷ ಪೂರೈಸಿದ ಸುಮಾರು 258 ಶತಮಾನದ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಲು ಕೋರಿದೆ. ಆ ಅನುದಾನದಿಂದ ಸ್ಮಾರ್ಟ್ ಕ್ಲಾಸ್, ಶಾಲಾ ಕೊಠಡಿ, ದುರಸ್ತಿ ಸೇರಿ ಜಿಲ್ಲೆಯ ಎಲ್ಲ ಶಾಲೆಗಳನ್ನು ಉನ್ನತೀಕರಿಸಲಾಗುವುದು ಎಂದರು.