ವಿಜಯಪುರ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶನಿವಾರ ಭೂಮಿಪೂಜೆ ನೆರವೇರಿಸಿದರು.
ನಗರ ಮತಕ್ಷೇತ್ರದ ವ್ಯಾಪ್ತಿಯ ಖಂಡಸಾರಿ ತಾಂಡಾದಲ್ಲಿ 1 ಕೋಟಿ ರೂ. ಅನುದಾನದಡಿ ತಾಂಡಾದ ಮುಖ್ಯ ರಸ್ತೆ ಮತ್ತು ಆಂತರಿಕ ಸಿಸಿ ರಸ್ತೆ ಅಭಿವೃದ್ಧಿಪಡಿಸುವುದು ಹಾಗೂ 5 ಲಕ್ಷ ರೂ. ಅನುದಾನದಲ್ಲಿ ಸೇವಾಲಾಲ್ ದೇವಸ್ಥಾನದ ಬಳಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಅಲ್ಲದೇ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಿಸಲಾದ ಅನುದಾನದಲ್ಲಿ ಅಳವಡಿಸಲಾದ ಹೈಮಾ¸್ಟï ದೀಪ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.
ಅದಕ್ಕೂ ಮುನ್ನ ವಾರ್ಡ್ ನಂ.1 ರಲ್ಲಿ ಬರುವ ಶಕ್ತಿ ನಗರ ರವೀಂದ್ರನಾಥ ಟ್ಯಾಗೋರ್ ಶಾಲೆ ಎದುರು ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ 25 ಲಕ್ಷ ರೂ. ಅನುದಾನದಲ್ಲಿ ಶಕ್ತಿ ನಗರ ಶಿವಶಿಂಪಿ ಸಮಾಜದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಸ್ಥಳಯರು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಸನ್ಮಾನಿಸಿ ಗೌರವಿಸಿದರು.