ಗರ್ಭಿಣಿಯನ್ನು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಂದಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆರಿಗೆಗೆ ದಾಖಲು ಮಾಡಿದಾಗಲೂ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಇರಲಿಲ್ಲ ಎಂದು ಕುಟುಂಬದವರು ಹೇಳಿದ್ದು, ಆಸ್ಪತ್ರೆಯಲ್ಲಿನ ನರ್ಸ್ಗಳು ಸಂಜೆ 6.52ಕ್ಕೆ ಹೆರಿಗೆ ಮಾಡಿಸಿ, ಹೆರಿಗೆ ವೇಳೆ ಜನಿಸಿದ ಗಂಡು ಮಗು ಸತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ನಂತರ ಹೆರಿಗೆ ಸಂದರ್ಭದಲ್ಲಿ ರಕ್ತಸ್ರಾವ ಅಽಕವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಿಬ್ಬಂದಿ ತಿಳಿಸಿದ್ದಾರೆ. ಇದರಿಂದ ದಿಕ್ಕುತೋಚದೆ ಕುಟುಂಬದವರು ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ತಂದು ದಾಖಲು ಮಾಡಿದ್ದಾರೆ. ಅಲ್ಲಿಯ ವೈದ್ಯರೂ ಬಾಣಂತಿ ಸ್ಥಿತಿ ಗಮನಿಸಿ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.