ರಾಷ್ಟ್ರೀಯ ಏಕತಾ ನಡಿಗೆಗೆ ಚಾಲನೆ, ದೇಶದ ಏಕತೆ-ಸಮಗ್ರತೆಗಾಗಿ ಪಣತೊಡಿ ಎಂದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ ನಗರದ ಛತ್ರಪತಿ ಶಿವಾಜಿ ವೃತ್ತದಲ್ಲಿ ಸಂಸದ ರಮೇಶ ಜಿಗಿಜಿಣಗಿ ಅವರು ಏಕತಾ ನಡಿಗೆಗೆ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಡಾ.ಆನಂದ ಕೆ, ಮಹಾಪೌರ ಎಂ.ಎಸ್. ಕರಡಿ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮತ್ತಿತರರಿದ್ದಾರೆ.
ವಿಜಯಪುರ ನಗರದ ಛತ್ರಪತಿ ಶಿವಾಜಿ ವೃತ್ತದಲ್ಲಿ ಸಂಸದ ರಮೇಶ ಜಿಗಿಜಿಣಗಿ ಅವರು ಏಕತಾ ನಡಿಗೆಗೆ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಡಾ.ಆನಂದ ಕೆ, ಮಹಾಪೌರ ಎಂ.ಎಸ್. ಕರಡಿ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮತ್ತಿತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರೀಯ ಏಕತಾ ನಡಿಗೆಗೆ ಚಾಲನೆ
  • ದೇಶದ ಏಕತೆ-ಸಮಗ್ರತೆಗಾಗಿ ಪಣತೊಡಿ
  • ಸಂಸದ ರಮೇಶ ಜಿಗಜಿಣಗಿ ಹೇಳಿದರು
ವಿಜಯಪುರ: ಭಾರತದ ಶಕ್ತಿ ವೈವಿಧ್ಯತೆಯಲ್ಲಿದೆ. ವೈವಿಧ್ಯತೆಯಲ್ಲಿಯೇ ಏಕತೆ ಅಡಗಿದೆ. ಹೀಗಾಗಿ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರೂ ಪಣತೊಡಬೇಕಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ನಗರದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಯುವ ಕಾರ್ಯ ಮತ್ತು ಕ್ರೀಡಾ ಮಂತ್ರಾಲಯ, ಮೈ ಭಾರತ ಇಲಾಖೆ, ಎನ್‌ಎಸ್‌ಎಸ್ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಏಕತಾ ನಡಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ ಅವರನ್ನು ಗೌರವಿಸಲು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತಿದೆ. ಭಾರತ ಐಕ್ಯತೆ ಮತ್ತು ಸಮಗ್ರತೆಯನ್ನು ಪುನರ್ ರಚಿಸಲು ಭಾರತ ಸರ್ಕಾರ 2014 ರಿಂದ ಏಕತಾ ದಿನ ಆಚರಿಸುತ್ತಾ ಬಂದಿದೆ. ಪಟೇಲರ ಸಾಧನೆಗಳು ನಮ್ಮೆಲ್ಲರಿಗೂ ಸ್ಪೂರ್ತಿಯಾಗಿವೆ. ಐಕ್ಯತೆ, ಸಮಗ್ರತೆ, ಆಂತರಿಕ ಭದ್ರತೆ ನಿಟ್ಟಿನಲ್ಲಿ ಸರ್ವರನ್ನೂ ಒಗ್ಗೂಡಿಸಿ ಕಾರ್ಯ ನಿರ್ವಹಿಸಲು ಈ ಏಕತಾ ದಿನ ಆಚರಣೆ ಪ್ರೇರಣೆಯಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ.ಆನಂದ ಕೆ ಮಾತನಾಡಿ, ಸರ್ದಾರ್ ವಲ್ಲಭಬಾಯಿ ಪಟೇಲ ಅವರು ವೈವಿಧ್ಯಮಯ ರಾಜ ಪ್ರಭುತ್ವಗಳನ್ನು ಒಗ್ಗೂಡಿಸಿ ಆಧುನಿಕ ಭಾರತೀಯ ರಾಷ್ಟ್ರವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತದ ನಾಗರೀಕರಲ್ಲಿ ರಾಷ್ಟ್ರೀಯ ಏಕತೆ, ದೇಶಭಕ್ತಿ ಮತ್ತು ಸಾಮರಸ್ಯ, ಆದರ್ಶಗಳನ್ನು ಪಾಲಿಸಲು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದರು.
ಮಹಾಪೌರ ಎಂ.ಎಸ್. ಕರಡಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಜಾವೀದ ಜಮಾದಾರ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಭೀಮಾಂಶಕರ ಹದನೂರ, ಚಂದ್ರಶೇಖರ ಕವಟಗಿ, ಈರಣ್ಣಾ ರಾವೂರ, ಮಲ್ಲು ಕಲಾದಗಿ, ಶ್ರೀಧರ ಬಿಜ್ಜರಗಿ, ಸುರೇಶ ಬಿಜಾಪುರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಉಮೇಶ ಕೋಳಕೂರ, ವಿಜಯ ಜೋಶಿ, ಮಹಾನಗರ ಪಾಲಿಕೆ ಸದಸ್ಯ ಮಳುಗೌಡ ಬಿರಾದಾರ, ಎನ್‌ಎಸ್‌ಎಸ್‌ಅಧಿಕಾರಿ ಗಂಗಾಧರ ಅಗಸರ, ನಾಗೇಶ ಡೋಣೂರ, ಜಿಲ್ಲಾ ಯುವ ಅಧಿಕಾರಿ ಗೌತಮ ರೆಡ್ಡಿ ಉಪಸ್ಥಿತರಿದ್ದರು.
ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಧ್ವಜದೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮಕ್ಕೂ ಮುನ್ನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಛತ್ರಪತಿ ಶಿವಾಜಿ ವೃತ್ತದಿಂದ ಆರಂಭಗೊಂಡ ಏಕತಾ ನಡಿಗೆ ವಿವಿಧ ಮಾರ್ಗಗಳಲ್ಲಿ ಸಂಚರಿಸಿ ಕಂದಗಲ್ಲ ಹನುಮಂತರಾಯ ರಂಗಮಂದಿರ ತಲುಪಿ ಸಮಾವೇಶವಾಗಿ ಮಾರ್ಪಟ್ಟಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net