ಭಗವಾನ್ ಬುದ್ಧರ ಜಯಂತಿಗೆ ಅಗತ್ಯ ಸಿದ್ಧತೆ

ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಡಾ. ಔದ್ರಾಮ ಮಾತನಾಡಿದರು. ಸಂತೋಷ ಭೋವಿ ಇದ್ದಾರೆ.
ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಡಾ. ಔದ್ರಾಮ ಮಾತನಾಡಿದರು. ಸಂತೋಷ ಭೋವಿ ಇದ್ದಾರೆ.
Published on
ವಿಜಯಪುರ: ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಮೇ ೧ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮದ ಅಂಗವಾಗಿ ಗುರುವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಈ ನಿರ್ಧಾರ ತಿಳಿಸಿದರು.
ಜಗತ್ತಿಗೆ ಜ್ಞಾನದ ಬೆಳಕಾಗಿ ಶಾಂತಿ, ಸಮಾನತೆಯ ದಾರಿ ತೋರಿದಂತಹ ಹಾಗೂ ಜಗತ್ತಿಗೆ ಶಾಂತಿ ಬೋಽಸಿದ ಬುದ್ಧನ ಆದರ್ಶ-ವಿಚಾರಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಭಗವಾನ್ ಬುದ್ಧ ಅವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಯಂತಿ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಅಲ್ಲದೇ, ಓರ್ವ ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿ ಮುಂತಾದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಅಡಿವೆಪ್ಪ ಸಾಲಗಲ್, ರಾಜಶೇಖರ ಯಡಹಳ್ಳಿ, ಮಹೇಶ ಕ್ಯಾತಣ್ಣವರ, ಸಂತೋಷ ಶಾಹಪೂರ, ಸೋಮನಗೌಡ ಕಲ್ಲೂರ, ರಾಜು ತೊರವಿ, ಲಾಲು ಗುಡಿಮನಿ, ಭೀಮರಾಯ ಜಿಗಜಿಣಗಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net