‘ಪಂಚ ಗ್ಯಾರಂಟಿ’ ನಾಡಿನ ಜನತೆಗೆ ಆಶಾಕಿರಣ, ಶಾಸಕ ವಿಠಲ ಕಟಕದೊಂಡ ಅಭಿಮತ

ವಿಜಯಪುರ ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶಾಸಕ ವಿಠಲ ಕಟಕದೊಂಡ ಅವರು ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಿದರು. ಜಿಪಂ ಸಿಇಒ ರಿಷಿ ಆನಂದ, ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ರವಿದಾಸ ಜಾಧವ ಇತರರಿದ್ದಾರೆ.
ವಿಜಯಪುರ ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶಾಸಕ ವಿಠಲ ಕಟಕದೊಂಡ ಅವರು ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಿದರು. ಜಿಪಂ ಸಿಇಒ ರಿಷಿ ಆನಂದ, ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ರವಿದಾಸ ಜಾಧವ ಇತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ
  • ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ
  • 32 ಫಲಾನುಭವಿಗಳಿಗೆ ಕೀ ಹಸ್ತಾಂತರ
ವಿಜಯಪುರ: ‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನೇರವಾಗಿ ಜನರನ್ನು ತಲುಪುತ್ತಿವೆ. ಹಾಗಾಗಿ ಐದು ಗ್ಯಾರಂಟಿ ಯೋಜನೆಗಳು ನಾಡಿನ ಬಡವರು, ದೀನ-ದುರ್ಬಲರ ಬದುಕಿಗೆ ಆಶಾಕಿರಣವಾಗಿವೆ’ ಎಂದು ನಾಗಠಾಣ ಶಾಸಕ ವಿಠಲ ಕಟಕದೊಂಡ ಹೇಳಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಮಂಗಳವಾರ ಹಮ್ಮಿಕೊಂಡಿದ್ದ ತ್ರಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ 32 ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿಚಕ್ರವಾಹನ ಕೀ ಹಸ್ತಾಂತರಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಯಾವುದೇ ಕಾರ್ಯ ಶುದ್ಧ ಹಾಗೂ ನಿಷ್ಕಲ್ಮಶ ಮನಸ್ಸಿನಿಂದ ಮಾಡಿದರೆ ಅದು ಫಲ ಕೊಟ್ಟೇ ಕೊಡುತ್ತದೆ. ನಮ್ಮ ಸರ್ಕಾರ ಶುದ್ದ ಮನಸ್ಸಿನಿಂದ ಈ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದರಿಂದ ರಾಜ್ಯದ ಬಹುತೇಕ ಬಡವರಿಗೆ ಈ ಯೋಜನೆಗಳು ವರದಾನವಾಗಿವೆ ಎಂದರು.
ಚಡಚಣ ವಿಭಾಗದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರವಿದಾಸ ಜಾಧವ ಮಾತನಾಡಿ, ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರ ಮಾಸಾಶನ, ಬಸ್ ಪಾಸ್, ಉಚಿತ ಶಿಕ್ಷಣ ಮತ್ತಿತರ ಸೌಲಭ್ಯ ಒದಗಿಸಿದೆ. ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ನಮ್ಮ ಸಂವಿಧಾನದಲ್ಲಿ ಎಲ್ಲರಿಗೂ ಸಮನಾಗಿ ಬಾಳುವ ಹಕ್ಕು ಇದೆ. ಅಂಗವಿಕಲತೆ ಕೊರತೆ ಅಲ್ಲ. ಅದೊಂದು ಸ್ಪೂರ್ತಿಯಾಗಿ ತಗೆದುಕೊಳ್ಳಬೇಕು ಎಂದರು.
ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ವಿಜಯಪುರದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ರಾಜಶೇಖರ ಅವಜಿ, ಪಾಲಿಕೆ ಸದಸ್ಯರಾದ ಶಫೀಕ ಮನಗೂಳಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಲಿಂ ಪೀರಜಾದೆ, ಸಂತೋಷ ಪಾಟೀಲ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net