ಇಂಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಉದ್ಘಾಟನೆ ಕಾರ್ಯಕ್ರಮವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿದರು. ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ ಬಿ.ಎಸ್. ಕಡಕಭಾವಿ ಇತರರಿದ್ದಾರೆ.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ರಾಪಲ್ಸ್ ಪೋಲಿಯೋ ಕಾರ್ಯಕ್ರಮ
ಮಗುವಿಗೆ ಎರಡು ಹನಿ ಲಸಿಕೆ ಚಾಲನೆ
ಇಂಡಿ: ಪಾಲಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ ಅಂಗವೈಕಲ್ಯ ಹರಡುವುದನ್ನು ತಡೆಗಟ್ಟಬೇಕೆಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಭಾನುವಾರ ತಾಲೂಕು ಸಾರ್ವಜನಿಕ ಆಸ್ಪತ್ರೆಯಿಂದ ಹಮ್ಮಿಕೊಂಡಿದ್ದ ರಾಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಎರಡು ಹನಿ ಲಸಿಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾರ್ವಜನಿಕ ಆಸ್ಪತ್ರೆಗೆ ಬರುವ ದಾರಿ ಕೆಟ್ಟಿದ್ದು, ಶೀಘ್ರ ಅದನ್ನು ದುರಸ್ತಿ ಮಾಡಿಸುವುದಾಗಿ ತಿಳಿಸಿದರಲ್ಲದೆ, ಆಸ್ಪತ್ರೆಯಲ್ಲಿ ಇನ್ನು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಇನ್ನೆರಡು ದಿನಗಳಲ್ಲಿ ಸಭೆ ಸೇರಿ ಚರ್ಚಿಸೋಣ ಎಂದು ಆಸ್ಪತ್ರೆ ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ಇಒ ಭೀಮಾಶಂಕರ ಕನ್ನೂರ, ಡಾ.ರಾಜೇಶ ಕೋಳೇಕರ, ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಡಾ. ರಾಜಶೇಖರ ತೋಳನೂರ, ಸುಧೀರ ಕರಿಕಟ್ಟಿ, ಸತೀಶ ಕುಂಬಾರ, ರಾಜು ಪತಂಗೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಪ್ಪ ಚನಗೊಂಡ, ಗೊಲ್ಲಾಳಪ್ಪಗೌಡ ಪಾಟೀಲ, ಮಲ್ಲಮ್ಮ ನಾವಿ, ಮಿಲಿಂದ ಹೊಸಮನಿ ಇತರರಿದ್ದರು.